ಕರ್ನಾಟಕ

karnataka

ETV Bharat / state

ರಾಹುಲ್ ಗಾಂಧಿ ವಿರುದ್ಧ ಅಪಪ್ರಚಾರದ ಆರೋಪ ; ಪತ್ರಕರ್ತ, ಲೇಖಕ ಅಜೀತ್ ಭಾರತಿ ವಿರುದ್ಧ ಎಫ್ಐಆರ್ - journalist Ajith Bharti

ರಾಹುಲ್ ಗಾಂಧಿ ವಿರುದ್ಧ ಅಪಪ್ರಚಾರದ ಆರೋಪದ ಮೇರೆಗೆ ಪತ್ರಕರ್ತ ಅಜೀತ್ ಭಾರತಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

fir
ಎಫ್ಐಆರ್ (ETV Bharat)

By ETV Bharat Karnataka Team

Published : Jun 16, 2024, 7:05 PM IST

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕುರಿತು ಅಪಪ್ರಚಾರ ಮಾಡಿದ ಆರೋಪದಡಿ ಪತ್ರಕರ್ತ ಹಾಗೂ ಲೇಖಕ ಅಜೀತ್ ಭಾರತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಹಾಗೂ ವಕೀಲ ಬಿ. ಕೆ ಬೋಪಣ್ಣ ಅವರು ನೀಡಿರುವ ದೂರಿನನ್ವಯ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ 153A (ಧರ್ಮ, ಜಾತಿ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಮೂಡಿಸುವುದು) ಹಾಗೂ 505(2) (ಜಾತಿ, ಧರ್ಮ, ಜನಾಂಗದ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಉದ್ದೇಶದಿಂದ ನಕಲಿ ಸುದ್ದಿ ಹರಡುವಿಕೆ) ಕಾಯ್ದೆಯಡಿ ಅಜೀತ್ ಭಾರತಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಜೂನ್ 6 ರಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವಿಡಿಯೋವೊಂದನ್ನ ಹಂಚಿಕೊಂಡಿದ್ದ ಅಜೀತ್ ಭಾರತಿ, ''ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶ್ರೀರಾಮ ಮಂದಿರದ ಬದಲಿಗೆ ಬಾಬರಿ ಮಸೀದಿಯನ್ನು ಮರಳಿ ತರಲು ಉದ್ದೇಶಿಸಿದ್ದಾರೆ'' ಎಂದು ಹೇಳಿದ್ದಾರೆ. ಆದರೆ, ರಾಹುಲ್ ಗಾಂಧಿಯವರು ತಮ್ಮ ಯಾವುದೇ ಭಾಷಣಗಳಲ್ಲಿ ಅಂತಹ ಯಾವುದೇ ಹೇಳಿಕೆ ನೀಡಿರುವುದಿಲ್ಲ. ಸಮುದಾಯಗಳ ನಡುವೆ ಭಿನ್ನಾಭಿಪ್ರಾಯ ಮತ್ತು ದ್ವೇಷವನ್ನು ಪ್ರಚೋದಿಸುವ ಉದ್ದೇಶದಿಂದ, ಅಜೀತ್ ಭಾರತಿಯವರು ಸುಳ್ಳು ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಇದು ಸಾರ್ವಜನಿಕ ವ್ಯವಸ್ಥೆಯಲ್ಲಿ ಶಾಂತಿಯನ್ನು ಕದಡುವ ಮತ್ತು ಪ್ರಚೋದಿಸುವ ಸ್ಪಷ್ಟ ಉದ್ದೇಶದಿಂದ ಕೂಡಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರಿನನ್ವಯ ಸದ್ಯ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ :'ಬಂಡವಾಳ ಹೂಡಿಕೆ ಬಗ್ಗೆ ಅಪಪ್ರಚಾರ ಮಾಡುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು' - D K Shivakumar

ABOUT THE AUTHOR

...view details