ಕರ್ನಾಟಕ

karnataka

ETV Bharat / state

ತನಿಖೆ ವೇಳೆ ನಾಗೇಂದ್ರ ಹೆಸರು ಹೇಳುವಂತೆ ಒತ್ತಡದ ಆರೋಪ; ಇಬ್ಬರು ED ಅಧಿಕಾರಿಗಳ ವಿರುದ್ಧವೇ ಎಫ್ಐಆರ್ - FIR against two ED officers - FIR AGAINST TWO ED OFFICERS

ವಾಲ್ಮೀಕಿ ನಿಗಮದಲ್ಲಿನ ಅಕ್ರಮದ ತನಿಖೆಯ ವೇಳೆ ನಾಗೇಂದ್ರ ಹೆಸರು ಹೇಳುವಂತೆ ಒತ್ತಾಯಿಸಿದ ಆರೋಪದ ಮೇರೆಗೆ ಇಬ್ಬರು ಇಡಿ ಅಧಿಕಾರಿಗಳ ಮೇಲೆಯೇ ಎಫ್​ಐಆರ್ ದಾಖಲಾಗಿದೆ.

ED
ಇಡಿ (ETV Bharat)

By ETV Bharat Karnataka Team

Published : Jul 22, 2024, 9:01 PM IST

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ED ಅಧಿಕಾರಿಗಳ ವಿರುದ್ಧವೇ ಆರೋಪ ಕೇಳಿ ಬಂದಿದ್ದು, ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಗರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು, 'ಮಾಜಿ ಸಚಿವ ಬಿ. ನಾಗೇಂದ್ರ ಅವರ ಒತ್ತಡದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ' ಒತ್ತಡ ಹಾಕಿದ್ದಾರೆ ಹಾಗೂ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್ ಬಿ ದೂರು ನೀಡಿದ್ದಾರೆ.

ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಇ.ಡಿ ಅಧಿಕಾರಿಗಳು ಸೂಚಿಸಿದ ಹಿನ್ನೆಲೆಯಲ್ಲಿ ಜುಲೈ 16ರಂದು ಶಾಂತಿನಗರದ ಇಡಿ ಕಚೇರಿಗೆ ತೆರಳಿದ್ದಾಗ, ಸಹಾಯಕ ನಿರ್ದೇಶಕ ಮುರುಳಿ ಕಣ್ಣನ್ ಹೇಳಿಕೆಯನ್ನ ದಾಖಲಿಸಿಕೊಂಡಿದ್ದಾರೆ. ನನಗೆ ಕೇಳಲಾದ 17 ಪ್ರಶ್ನೆಗಳಿಗೆ ಉತ್ತರ ನೀಡುತ್ತೇನೆ. ಅದರಲ್ಲಿ ಮೂರು ಪ್ರಶ್ನೆಗಳಿಗೆ ಉತ್ತರಿಸಲು ನನಗೆ ಕಡತಗಳು ಹಾಗೂ ನನ್ನ ಕೆಳಹಂತದ ಅಧಿಕಾರಿಗಳು ಬೇಕಾಗುತ್ತಾರೆ ಎಂದು ತಿಳಿಸಿದ್ದೇನೆ.

ಆಗ ಕಣ್ಣನ್ ಅವರು ಜುಲೈ 18 ರಂದು ಮಧ್ಯಾಹ್ನ 2 ಗಂಟೆಗೆ ಬನ್ನಿ ಎಂದು ತಿಳಿಸಿರುತ್ತಾರೆ. ನಂತರ ನನ್ನ ಹೇಳಿಕೆಗಳಿಗೆ ಸಹಿ ಪಡೆದಾಗ ನಾನು ಅದರ ಒಂದು ಪ್ರತಿಯನ್ನ ನನಗೂ ಕೊಡಿ ಎಂದರೂ ಕೊಡಲಿಲ್ಲ. ನಂತರದಲ್ಲಿ ಯಾವುದೇ ಲಿಖಿತ ರೂಪದ ಪ್ರಶ್ನೆಗಳನ್ನ ಕೇಳದೆಯೇ, 'ಎಂ. ಜಿ ರೋಡ್ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲು ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ಎಫ್.ಡಿ ಇಲಾಖೆಯಿಂದ ಸೂಚನೆ ಇತ್ತು ಎಂದು ಒಪ್ಪಿಕೊಂಡಲ್ಲಿ ನಿಮ್ಮನ್ನು ಬಿಡುತ್ತೇವೆ. ಇಲ್ಲದಿದ್ದರೆ ಅರೆಸ್ಟ್ ಮಾಡುತ್ತೇವೆ. ಎರಡು ವರ್ಷವಾದರೂ ನಿಮಗೆ ಜಾಮೀನು ಸಿಗುವುದಿಲ್ಲ' ಎಂದು ಕಣ್ಣನ್, ಮಿತ್ತಲ್ ಎಂಬ ಅಧಿಕಾರಿಗಳು ಬೆದರಿಸಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ತಮ್ಮ ದೂರಿನಲ್ಲಿ ಕಲ್ಲೇಶ್ ಆರೋಪಿಸಿದ್ದಾರೆ.

ಇ.ಡಿ ಅಧಿಕಾರಿಗಳ ವಿರುದ್ಧ ಆರೋಪಿಸಿರುವ ಕಲ್ಲೇಶ್ ಶೇಷಾದ್ರಿಪುರಂ ಠಾಣೆಗೆ ದೂರು ನೀಡಿದ್ದು, ಸ್ಥಳದ ಆಧಾರದಲ್ಲಿ ದೂರನ್ನ ವರ್ಗಾವಣೆ ಪಡೆದಿರುವ ವಿಲ್ಸನ್ ಗಾರ್ಡನ್ ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ :ವಾಲ್ಮೀಕಿ ನಿಗಮ ಹಗರಣದ ಹಣ ಮದ್ಯ ಖರೀದಿಗೆ ಬಳಕೆ: ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ ಇಡಿ - Valmiki Corporation Scam Case

ABOUT THE AUTHOR

...view details