ಬೆಂಗಳೂರು:ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ಜೋರಾಗಿಯೇ ಸಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಭರ್ಜರಿ ಮತ ಬೇಟೆ ಆರಂಭಿಸಿದ್ದಾರೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೌದು, ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಧರ್ಮ , ಭಾಷೆ ಜಾತಿ , ಸೌಹಾರ್ದ್ಯತೆ ವಿಚಾರದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಾದ ಹಿನ್ನೆಲೆ ಬಿ ವೈ ವಿಜಯೇಂದ್ರ ಹಾಗೂ ಬಿಜೆಪಿ for Karnataka ಖಾತೆ ಮೇಲೆ ಎಫ್ಐಆರ್ ದಾಖಲಾಗಿದೆ.