ಬೆಳಗಾವಿ:ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ನಲ್ಲಿ ಆಕ್ಷೇಪಾರ್ಹ ಪದ ಬಳಸಿದ ಆರೋಪದ ಮೇಲೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಇಂದು ಎಫ್‌ಐಆರ್ ದಾಖಲಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ ದೂರಿನನ್ವಯ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲು - FIR ON C T RAVI
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿರುವ ಆರೋಪದಡಿ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ (ETV Bharat)
Published : Dec 19, 2024, 7:18 PM IST
ದೂರು, ಪ್ರತಿದೂರು ದಾಖಲು:ಸಿ.ಟಿ.ರವಿ ಅವರು ನನ್ನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಅವರನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಸಭಾಪತಿಗೆ ಲಕ್ಷ್ಮಿ ಹೆಬ್ಬಾಳ್ಕರ್ ದೂರು ನೀಡಿದರೆ, ಇದಕ್ಕೆ ಪ್ರತಿ ದೂರು ನೀಡಿರುವ ಸಿ.ಟಿ.ರವಿ, ನಾನು ಆ ರೀತಿ ಪದ ಬಳಕೆ ಮಾಡಿಲ್ಲ. ಎಲ್ಲ ಮಹಿಳೆಯರನ್ನೂ ಗೌರವದಿಂದ ಕಾಣುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಬೆಳಗಾವಿ: ಸುವರ್ಣಸೌಧದ ಕಾರಿಡಾರ್ನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ - C T RAVI STATEMENT ROW