ಚಿಕ್ಕಮಗಳೂರು :ಎಂಎಲ್ಸಿ ಸಿ. ಟಿ ರವಿ ಸ್ವಾಗತ ಮೆರವಣಿಗೆ ವೇಳೆ ಆಂಬ್ಯುಲೆನ್ಸ್ ಬಳಕೆ ಮಾಡಿರುವ ಆರೋಪದ ಮೇರೆಗೆ ಆಂಬ್ಯುಲೆನ್ಸ್ ಮಾಲೀಕ ಹಾಗೂ ಚಾಲಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ವಿಧಾನ ಪರಿಷತ್ ಕಲಾಪದ ಸಂದರ್ಭದಲ್ಲಿ ತಮ್ಮ ವಿರುದ್ಧ ಆಕ್ಷೇಪಾರ್ಹ ಪದಬಳಕೆ ಮಾಡಿದ್ದಾರೆಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ್ದ ದೂರಿನ ಅನ್ವಯ ಬಿಜೆಪಿ ಪರಿಷತ್ ಸದಸ್ಯ ಸಿ ಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು. ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಬಿಡುಗಡೆಯಾಗಿದ್ದ ಸಿ ಟಿ ರವಿ ತವರು ಜಿಲ್ಲೆ ಚಿಕ್ಕಮಗಳೂರಿಗೆ ಆಗಮಿಸಿದ್ದರು.
ಎಂಎಲ್ಸಿ ಸಿ ಟಿ ರವಿ ಸ್ವಾಗತ ಮೆರವಣಿಗೆಗೆ ಆಂಬ್ಯುಲೆನ್ಸ್ ಬಳಕೆ (ETV Bharat) ಈ ವೇಳೆ ಎಂಎಲ್ಸಿ ಸಿ. ಟಿ ರವಿ ಸ್ವಾಗತ ಮೆರವಣಿಗೆಗೆ 7 ಆಂಬ್ಯುಲೆನ್ಸ್ಗಳನ್ನ ಬಳಸಿದ ಕಾರ್ಯಕರ್ತರು ಸೈರನ್ ಲೈಟ್ ಹಾಕಿ ಮೆರವಣಿಗೆ ಮಾಡಿದ್ದರು. ಹೀಗಾಗಿ ಆಂಬ್ಯುಲೆನ್ಸ್ ಮಾಲೀಕ ಹಾಗೂ ಚಾಲಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಾರ್ವಜನಿಕರಿಗೆ ಶಾಂತಿಭಂಗ ಉಂಟುಮಾಡಿದ ಆರೋಪದಡಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ :ತನ್ನ ಬಂಧನ, ಪೊಲೀಸರ ದೂರವಾಣಿ ಕರೆಗಳ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು: ಸಿ.ಟಿ. ರವಿ - CT RAVI RESPONDS TO FIR AND ARREST