ಬೆಂಗಳೂರು: ಯಲಹಂಕ ಸಮೀಪದ ರಾಜಾನುಕುಂಟೆಯ ರಕ್ಷಾ ಆಸ್ಪತ್ರೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಘಟನೆ ಇಂದು ನಡೆದಿದೆ.
ಬೆಂಗಳೂರು: ರಾಜಾನುಕುಂಟೆಯ ರಕ್ಷಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ - fire accident - FIRE ACCIDENT
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳನ್ನು ಬೇರೊಂದು ಆಸ್ಪತ್ರೆಗೆ ಸಾಗಿಸಲಾಗಿದೆ.
Published : May 7, 2024, 1:38 PM IST
ಕೆಲ ಕೊಠಡಿಗಳಲ್ಲಿ ಬೆಂಕಿ ಕಾಣಸಿಕೊಂಡ ಪರಿಣಾಮ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಬೇರೊಂದು ಆಸ್ಪತ್ರೆಗೆ ಸಾಗಿಸಲಾಗಿದೆ. ಐದನೇ ಮಹಡಿಯಲ್ಲಿ ರೋಗಿಗಳು ಇದ್ದು ಆತಂಕವನ್ನುಂಟು ಮಾಡಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಶಾಸಕ ಎಸ್.ಆರ್.ವಿಶ್ವನಾಥ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ:ಪಾಟ್ನಾದ ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ; 6 ಮಂದಿ ಸಾವು - Patna Hotel Fire