ಕರ್ನಾಟಕ

karnataka

ETV Bharat / state

ಬೆಂಗಳೂರು: ಎರಡಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, 30 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲು

ಪೈಂಟ್​ ಶಾಪ್​ವೊಂದರಲ್ಲಿ ಕಾಣಿಸಿಕೊಂಡಿದ್ದ ಬೆಂಕಿ ಕ್ರಮೇಣ ಇಡೀ ಕಟ್ಟಡವನ್ನೇ ಆವರಿಸಿದೆ.

ಅಗ್ನಿ ಅವಘಡ
ಅಗ್ನಿ ಅವಘಡ

By ETV Bharat Karnataka Team

Published : Jan 27, 2024, 10:28 AM IST

Updated : Jan 27, 2024, 10:52 AM IST

ಬೆಂಗಳೂರಿನಲ್ಲಿ ಬೆಂಕಿ ಅವಘಡ

ಬೆಂಗಳೂರು :ಎರಡಂತಸ್ತಿನ ಕಟ್ಟಡವೊಂದು ಅಗ್ನಿಗಾಹುತಿಯಾದ ಘಟನೆ ತಡರಾತ್ರಿ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಳೆಪೇಟೆಯಲ್ಲಿ ನಡೆದಿದೆ. ಬೆಂಕಿ ತಗುಲಿದ ಕೆಲವೇ ನಿಮಿಷಗಳಲ್ಲಿ ಕಟ್ಟಡದಲ್ಲಿದ್ದ 30 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

ಕಟ್ಟಡದ ಕೆಳ ಮಹಿಡಿಯಲ್ಲಿದ್ದ ಪೈಂಟ್​ ಶಾಪ್ ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಮೊದಲ ಮಹಡಿಯಲ್ಲಿದ್ದ ಬ್ಯಾಗ್ ಅಂಗಡಿಗೆ ಬೆಂಕಿ ವ್ಯಾಪಿಸಿದೆ. ಈ ವೇಳೆ ಕಟ್ಟಡದ ಒಳಗೆ ಪ್ರವೇಶಿಸಿದ್ದ ಯುವಕ ಹೊರಬರಲಾರದೆ ಸಿಲುಕಿಕೊಂಡಿದ್ದನು. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ. ಬಳಿಕ ಜೆಸಿಬಿ ಬಳಸಿ ಕಟ್ಟಡದ ಶೆಟರ್ಸ್​ ಮುರಿದು ಸತತ ನಾಲ್ಕು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ಕೈಗೊಂಡ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯ ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೈಂಟ್​ ಅಂಗಡಿ ಮಾಲೀಕ ಕೃಷ್ಣಮೂರ್ತಿ ಕುಟುಂಬಸ್ಥರು, '20 ವರ್ಷಕ್ಕೂ ಹಿಂದಿನಿಂದ ಇದೇ ಕಟ್ಟಡದಲ್ಲಿ ಪೈಂಟ್​ ವ್ಯಾಪಾರ ಮಾಡುತ್ತಿದ್ದೆವು. ಇದೇ ಮೊದಲ ಬಾರಿಗೆ ಈ ಅನಾಹುತವಾಗಿದೆ' ಎಂದು ಕಣ್ಣೀರು ಹಾಕಿದ್ದಾರೆ. ಘಟನೆಗೆ ನಿಖರ ಕಾರಣ ಏನು ಎಂಬುದನ್ನು ತಿಳಿಯಲು ಉಪ್ಪಾರಪೇಟೆ ಠಾಣಾ ಪೊಲೀಸರು ತನಿಖೆ‌ ಆರಂಭಿಸಿದ್ದಾರೆ.

ಇದನ್ನೂ ಓದಿ :ಮಂಗಳೂರು: ವೆಲ್ಡಿಂಗ್ ವೇಳೆ ಬೆಂಕಿ, ಟ್ಯಾಂಕ್ ಮೇಲಿಂದ ಬಿದ್ದು ವ್ಯಕ್ತಿ ಸಾವು

Last Updated : Jan 27, 2024, 10:52 AM IST

ABOUT THE AUTHOR

...view details