ನೆಲಮಂಗಲ: ಶಾರ್ಟ್ ಸರ್ಕ್ಯೂಟ್‌ನಿಂದ ಇ-ತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಂಕಿ ಬಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾದ ಘಟನೆ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿ ಮಂಗಳವಾರ ನಡೆದಿದೆ. ಎಲೆಕ್ಟ್ರಾನಿಕ್ ತ್ಯಾಜ್ಯಗಳ ಸಂಸ್ಕರಣಾ ಘಟಕದಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಮಾಹಿತಿ ಪಡೆದ ತಕ್ಷಣ 14 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿದ್ದವು. ರಾತ್ರಿಯಿಡೀ ಕಾರ್ಯಚರಣೆ ನಡೆಸಿದ ಸಿಬ್ಬಂದಿ ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಇ-ತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಂಕಿ, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ - Fire At E Waste Disposal Unit - FIRE AT E WASTE DISPOSAL UNIT
ಇ-ತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಂಕಿ ತಗುಲಿ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇ-ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ (ETV Bharat)
Published : May 22, 2024, 10:20 AM IST
ಇಂಥ ಅವಘಡಗಳನ್ನು ತಪ್ಪಿಸಲು ದಾಬಸ್‌ಪೇಟ್ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿಶಾಮಕ ದಳ ಸ್ಧಾಪಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ.
ಇದನ್ನೂ ಓದಿ:ಬೆಂಗಳೂರು: ರಾಜಾನುಕುಂಟೆಯ ರಕ್ಷಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ - fire accident