ಹಾಸ್ಟೆಲ್ನಲ್ಲಿ ಅಗ್ನಿ ಅವಘಡ (ETV Bharat) ದಾವಣಗೆರೆ: ನಗರದ ತಿಮ್ಮಾರೆಡ್ಡಿ ಖಾಸಗಿ ಕಾಲೇಜಿನ ಬಾಲಕರ ಹಾಸ್ಟೆಲ್ನಲ್ಲಿ ಭಾನುವಾರ ರಾತ್ರಿ ಎಲೆಕ್ಟ್ರಿಕ್ ಪ್ಯಾನೆಲ್ ಬೋರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ವಿದ್ಯುತ್ ಸಾಮಗ್ರಿ ಬೆಂಕಿಗಾಹುತಿಯಾಗಿದ್ದು, ಭಾರಿ ದುರಂತ ತಪ್ಪಿದೆ.
ನಗರದ ಅನಂತಭವನ ವೃತ್ತದ ಹಿಂಭಾಗದಲ್ಲಿರುವ ತಿಮ್ಮಾರೆಡ್ಡಿ ಕಾಲೇಜಿನ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಪ್ಯಾನೆಲ್ ಬೋರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. 3 ಅಂತಸ್ತಿನ ಕಟ್ಟಡದಲ್ಲಿ ದಟ್ಟ ಹೊಗೆ ಕಂಡುಬಂದಿದ್ದನ್ನು ಅರಿತ ವಿದ್ಯಾರ್ಥಿಗಳು ಆತಂಕದಿಂದ ಹೊರಗೆ ಓಡಿ ಬಂದಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಬೆಸ್ಕಾಂ ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಗಳ ಸಮಯಪ್ರಜ್ಞೆಯಿಂದ ಹೆಚ್ಚಿನ ಅವಘಡ ತಪ್ಪಿದೆ.
ಘಟನೆಯಲ್ಲಿ ಲಕ್ಷಕ್ಕೂ ಅಧಿಕ ಮೌಲ್ಯದ ವಿದ್ಯುತ್ ಸಾಮಗ್ರಿ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಸ್ಥಳದಲ್ಲಿ ಅಪಾರ ಸಂಖ್ಯೆಯ ಜನರು ನೆರೆದಿದ್ದರು. ಪೊಲೀಸರು ಕೆಲಕಾಲ ಜನರನ್ನು ನಿಯಂತ್ರಿಸಲು ಹರಸಾಹಸಪಟ್ಟರು. ಅದೃಷ್ಟವಶಾತ್ ಯಾರಿಗೂ ತೊಂದರೆ ಆಗಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಬೆಂಗಳೂರು: ತಲ್ವಾರ್ ತೋರಿಸಿ ಡೆಲಿವರಿ ಬಾಯ್‌ಗಳನ್ನು ದೋಚುತ್ತಿದ್ದ ಮೂವರ ಬಂಧನ - Robbery Case