ಹುಬ್ಬಳ್ಳಿ:ನಗರದಲ್ಲಿ ಯುವಕನೋರ್ವನ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುದೀಪ್, ಕಿರಣ್ ಕೊಲೆ ಆರೋಪಿಗಳು.
ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಶಿವರಾಜ್ ಕಮ್ಮಾರ ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಹತ್ಯೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಕೊಲೆ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳನ್ನು ತೋರಿಸಲು ಬಂಧಿಸಿದ್ದ ಆರೋಪಿಗಳನ್ನು ಹಳೇ ಹುಬ್ಬಳ್ಳಿ ಪ್ರದೇಶಕ್ಕೆ ಕರೆದುಕೊಂಡು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ಧಾರೆ. ಕೂಡಲೇ ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಗುಂಡು ತಗುಲಿದ್ದರಿಂದ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಿಮ್ಸ್ ಆಸ್ಪತ್ರೆಗೆ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮಾಹಿತಿ ನೀಡಿದ್ದಾರೆ. "ನಿನ್ನೆ ರಾತ್ರಿ ಹುಬ್ಬಳ್ಳಿಯ ಗೋಪನಕೊಪ್ಪ ಜಂಕ್ಷನ್ನಲ್ಲಿ ಶಿವರಾಜ್ ಎಂಬ ಯುವಕನ ಕೊಲೆ ಪ್ರಕರಣದ ಇಬ್ಬರು ಕೊಲೆ ಆರೋಪಿಗಳು ವಶಕ್ಕೆ ಪಡೆಯಲಾಗಿತ್ತು. ಇಬ್ಬರು ಆರೋಪಿತರು ಇನ್ನುಳಿದವರ ಪತ್ತೆಗೆ ಸಹಕರಿಸುವುದಾಗಿ ಹೇಳಿದ್ದರು. ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ಇನ್ನಿಬ್ಬರು ಆರೋಪಿಗಳ ಪತ್ತೆಗೆ ಹೋದಾಗ, ಕಿರಣ್ ಮತ್ತು ಸುದೀಪ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ".