ಚಿಕ್ಕೋಡಿ: ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಕಳೆದು ಒಂದು ವಾರಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದ ಪರಿಣಾಮವಾಗಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಹರಿದು ಹೋಗುತ್ತಿರುವ ಕೃಷ್ಣಾ, ವೇದಗಂಗಾ, ದೂದಗಂಗಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ನದಿಗೆ ಅಡ್ಡಲಾಗಿರುವ ಐದು ಸೇತುವೆಗಳು ಜಲಾವೃತಗೊಂಡಿವೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಕೃಷ್ಣ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಕೃಷ್ಣಾ ನದಿಗೆ ಅಡ್ಡಲಾಗಿರುವ ಕೆಳಹಂತದ ಮಾಂಜರಿ - ಭಾವನ ಸೌಂದತ್ತಿ ಹಾಗೂ ಮಲ್ಲಿಕವಾಡ-ದತ್ತವಾಡ ಸಂಪರ್ಕ ಸೇತುವೆ ಜಲಾವೃತಗೊಂಡಿವೆ. ನಿಪ್ಪಾಣಿ ತಾಲೂಕಿನಲ್ಲಿ ವೇದಗಂಗಾ ನದಿಯಲ್ಲೂ ಕೂಡ ನೀರಿನ ಮಟ್ಟ ಏರಿಕೆಯಾಗಿದ್ದು ತಾಲೂಕಿನ ಕುನ್ನೂರ-ಬಾರವಾಡ ಸಂಪರ್ಕಿಸುವ ಸೇತುವೆ ಜಲಾವೃತವಾಗಿದ್ದು ಜೊತೆಗೆ ದೂದಗಂಗಾ ನದಿಗೆ ಅಡ್ಡಲಾಗಿರುವ ಕಾರದಗಾ-ಬೋಜ್, ಕುನ್ನೂರ-ಭೋಜವಾಡಿ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿವೆ.