ಕೋಲಾರ:ಮೂರು ಬೈಕ್ಗಳಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಐವರು ಸಾವನ್ನಪ್ಪಿರುವ ಘಟನೆ ಮುಳಬಾಗಿಲು ತಾಲೂಕಿನ ಗುಡಿಪಲ್ಲಿ ರಸ್ತೆಯಲ್ಲಿ ಇಂದು ನಡೆಯಿತು.
ಕೋನಂಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ವೆಂಕಟರಾಮಪ್ಪ ಪತ್ನಿ ಅಲುವೇಲಮ್ಮ (30) ಹಾಗೂ ಇಬ್ಬರು ಅಪರಿಚಿತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಐವರು ಕೂಲಿ ಕೆಲಸ ಮುಗಿಸಿಕೊಂಡು ಮೂರು ದ್ವಿಚಕ್ರ ವಾಹನಗಳಲ್ಲಿ ಮನೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ನಂಗಲಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆ ಮೇಲ್ಛಾವಣಿ ಕುಸಿದು ಮೂವರಿಗೆ ಗಾಯ