ಬೆಂಗಳೂರು: ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯಗಳಾದ ಘಟನೆ ಸಂಪಿಗೇಹಳ್ಳಿ ಠಾಣೆ ವ್ಯಾಪ್ತಿಯ ಎಂಎಸ್ ನಗರದಲ್ಲಿ ಬುಧವಾರ ತಡರಾತ್ರಿ 1 ಗಂಟೆ ಸುಮಾರಿಗೆ ಸಂಭವಿಸಿದೆ. ಗಾಯಾಳುಗಳನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳಿಗೆ ಬೆಂಕಿ ತಗುಲಿ ಗಂಭೀರ ಸುಟ್ಟ ಗಾಯಗಳಾಗಿವೆ. ಪತಿ ಮದನ್ ಚೌಹಾರ (32), ಹೆಂಡತಿ ಪ್ರೇಮ್ ಜಾಲ (28), ಮಕ್ಕಳಾದ ಹಿರದ್ (12), ಪ್ರಶಾಂತ್ (6) ಹಾಗೂ ಅನಿತಾ (8) ಗಂಭೀರ ಗಾಯಗೊಂಡವರು. ನೇಪಾಳ ಮೂಲದ ಈ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಿತ್ತು.