ಕರ್ನಾಟಕ

karnataka

ETV Bharat / state

ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಹೆಚ್ಚೆಚ್ಚು ಬಳಸಿ: ಸಿಎಂ ಸಿದ್ದರಾಮಯ್ಯ - ORGANIC AND MILLET FAIR

ಡಿಸೆಂಬರ್ 23, 24, 25 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

CM, DCM savoring millet dishes
ಸಿರಿಧಾನ್ಯ ಖಾದ್ಯಗಳನ್ನು ಸವಿಯುತ್ತಿರುವ ಸಿಎಂ, ಡಿಸಿಎಂ (ETV Bharat)

By ETV Bharat Karnataka Team

Published : Dec 13, 2024, 7:29 PM IST

Updated : Dec 13, 2024, 8:03 PM IST

ಬೆಳಗಾವಿ: ಇಡೀ ದೇಶದಲ್ಲಿ ಕರ್ನಾಟಕ ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಇಂದು‌ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ (ETV Bharat)

"ಇದೇ ಡಿಸೆಂಬರ್ 23, 24, 25 ರಂದು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ನಡೆಯಲಿದ್ದು, ಪೂರ್ವಭಾವಿ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ" ಎಂದು ತಿಳಿಸಿದರು.

ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ವಿಶ್ವದಲ್ಲಿ 903.61 ಲಕ್ಷ ಟನ್​ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50ರಷ್ಟು ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್​ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ. ಇದರಲ್ಲಿ ಪ್ರೊಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದೆ. ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ" ಎಂದರು‌‌.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​, ಕೃಷಿ ಸಚಿವ ಚಲುವರಾಯಸ್ವಾಮಿ, ಅರಣ್ಯ ಸಚಿವ ಈಶ್ವರ ಖಂಡ್ರೆ, ಹಿರಿಯ ಶಾಸಕ ಆರ್.ವಿ.ದೇಶಪಾಂಡೆ, ಶಾಸಕ ಎನ್.ಎಚ್.ಕೋನರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ ಇದ್ದರು.

ಇದನ್ನೂ ಓದಿ:ಮೈಸೂರಲ್ಲಿ ದೇಶದ ಮೊದಲ ಸಿರಿಧಾನ್ಯ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ: ಇದು ರೈತರು, ಉದ್ಯಮಿಗಳಿಗೆ ಬಹುಪಯೋಗಿ

Last Updated : Dec 13, 2024, 8:03 PM IST

ABOUT THE AUTHOR

...view details