ಬೆಂಗಳೂರು:ರಾಜ್ಯದಲ್ಲಿ ನಾಳೆಯಿಂದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಉದ್ದೇಶದಿಂದ ಬಿಜೆಪಿ ರಾಜ್ಯ ಘಟಕವು ಆರು ತಂಡಗಳನ್ನು ರಚಿಸಿದೆ. ಪ್ರತಿಪಕ್ಷದ ನಾಯಕ ಆರ್. ಅಶೋಕ್, ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಆರು ತಂಡಗಳು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿವೆ. ಈ ತಂಡಗಳು ನಾಳೆಯಿಂದ ಪ್ರವಾಸ ಕೈಗೊಳ್ಳಲಿವೆ.
ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಆರು ತಂಡ ರಚಿಸಿದ ಬಿಜೆಪಿ: ನಾಳೆಯಿಂದ ಪ್ರವಾಸ ಆರಂಭ - BJP tour in flood affected areas - BJP TOUR IN FLOOD AFFECTED AREAS
ಬಿಜೆಪಿಯು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಆರು ತಂಡಗಳನ್ನು ರಚಿಸಿದೆ. ಈ ತಂಡಗಳು ನಾಳೆಯಿಂದ (ಜುಲೈ 30 ರಂದು) ಪ್ರವಾಸ ಆರಂಭಿಸಲಿವೆ.
![ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಆರು ತಂಡ ರಚಿಸಿದ ಬಿಜೆಪಿ: ನಾಳೆಯಿಂದ ಪ್ರವಾಸ ಆರಂಭ - BJP tour in flood affected areas BJP tour BJP tour in flood affected areas Bengaluru](https://etvbharatimages.akamaized.net/etvbharat/prod-images/29-07-2024/1200-675-22076120-thumbnail-16x9-ok.jpg)
Published : Jul 29, 2024, 5:29 PM IST
ಪ್ರತಿಪಕ್ಷದ ನಾಯಕ ಆರ್. ಅಶೋಕ್ ತಂಡವು ಮಂಗಳೂರು, ಬೆಳಗಾವಿ ಜಿಲ್ಲೆಗಳಿಗೆ ಭೇಟಿ ಕೊಡಲಿದೆ. ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರ ತಂಡವು ಶಿವಮೊಗ್ಗ ಜಿಲ್ಲೆಗೆ, ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರ ತಂಡವು ಕೊಡಗು ಮತ್ತು ಉಡುಪಿ ಜಿಲ್ಲೆಗಳಿಗೆ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ತಂಡವು ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ, ಅರವಿಂದ ಬೆಲ್ಲದ್ ಅವರ ತಂಡವು ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಗೆ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ತಂಡವು ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ. ತಂಡಗಳಲ್ಲಿ ಹಾಲಿ ಶಾಸಕರು, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರು ಇರಲಿದ್ದಾರೆ ಎಂದು ಪ್ರಕಟಣೆಯಲ್ಲಿ ಬಿಜೆಪಿ ತಿಳಿಸಿದೆ.