ಕರ್ನಾಟಕ

karnataka

ETV Bharat / state

ಶಿವಮೊಗ್ಗ,ರಾಯಚೂರಿನಲ್ಲಿ ಇಂದು ರಾಹುಲ್ ಗಾಂಧಿ ಪ್ರಚಾರ - TODAY RAHUL IN KARNATAKA - TODAY RAHUL IN KARNATAKA

ಕಾಂಗ್ರೆಸ್​ ನೇತಾರ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಸಿಎಂ ಸಿದ್ದರಾಮಯ್ಯ ಅವರು ಇಂದು ರಾಯಚೂರಿನಲ್ಲಿ ನಡೆಯುವ ಕಾಂಗ್ರೆಸ್ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

Rahul Gandhi
ರಾಹುಲ್ ಗಾಂಧಿ

By ETV Bharat Karnataka Team

Published : May 2, 2024, 11:15 AM IST

ರಾಯಚೂರು: ಶಿವಮೊಗ್ಗ ಹಾಗೂ ರಾಯಚೂರು-ಯಾದಗಿರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಇಂದು ಪ್ರಚಾರ ನಡೆಸುವರು.

ಮಧ್ಯಾಹ್ನ 2 ಗಂಟೆಗೆ ಪ್ರಚಾರ ಸಭೆ:ನಗರದ ವಾಲ್ಕಾಟ್ ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಪ್ರಚಾರಸಭೆ ನಡೆಯಲಿದೆ. ಕಾಂಗ್ರೆಸ್‌ನ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಹಿನ್ನೆಲೆ ಈಗಾಗಲೇ ವೇದಿಕೆ, ಕಾರ್ಯಕರ್ತರಿಗೆ, ಮುಖಂಡರಿಗಾಗಿ ಆಸನ ವ್ಯವಸ್ಥೆ, ಹಾಗೂ ಎಲ್‌ಸಿಡಿ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಕಾಂಗ್ರೆಸ್​ ನಾಯಕರ ಆಗಮನಕ್ಕೆ ಹಿನ್ನೆಲೆ ನಗರದಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಬಿಗಿ ಪೊಲೀಸ್ ಬಂದೋ‌ಬಸ್ತ್ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.

ಇನ್ನೂ ರಾಯಚೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಆದರೆ, ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವ ಮೂಲಕ ಕ್ಷೇತ್ರ ಕಾಂಗ್ರೆಸ್ ಕೈತಪ್ಪಿತ್ತು. ಇದೀಗ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಅಬ್ಬರ ಪ್ರಚಾರವನ್ನು ಕಾಂಗ್ರೆಸ್ ಕೈಗೊಂಡಿದ್ದು, ರಾಷ್ಟ್ರೀಯ ನಾಯಕರು ಪಕ್ಷದ ಸಾಥ್ ನೀಡುವ ಮೂಲಕ ಕ್ಷೇತ್ರದಲ್ಲಿ ಚುನಾವಣೆ ಅಖಾಡ ರಂಗೇರುತ್ತಿದೆ ಎಂದರು.

ಈ ವೇಳೆ ಸಚಿವ ಎನ್.ಎಸ್.ಬೋಸರಾಜು ಮಾತನಾಡಿ, ರಾಹುಲ್ ‌ಗಾಂಧಿ ಸೇರಿದಂತೆ ಹಲವು ನಾಯಕರು ಪ್ರಚಾರ ಸಭೆಗೆ ಆಗಮಿಸಲಿದ್ದಾರೆ‌. ಇದಕ್ಕಾಗಿ ಅಗತ್ಯ ಸಿದ್ದತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ಪ್ರಚಾರ:ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜಕುಮಾರ್‌ ಪರ ಪ್ರಚಾರಕ್ಕಾಗಿ ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ಅವರು ಮೇ 2 ಗುರುವಾರ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ ನಡೆಯಲಿರುವ ಬೃಹತ್‌ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌, ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಸೇರಿದಂತೆ ಇನ್ನಿತರ ಪ್ರಮುಖರು ಭಾಗವಹಿಸಲಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ಮಧ್ಯಾಹ್ನ 12 ಗಂಟೆಗೆ ರಾಹುಲ್‌ ಗಾಂಧಿ ಆಗಮಿಸುವರು ಎಂದು ವಿವರಿಸಿದರು.

ಇದನ್ನೂಓದಿ:28 ಲೋಕಸಭಾ ಕ್ಷೇತ್ರ ಗೆಲ್ಲಲು ಶಕ್ತಿಮೀರಿ ಪ್ರಯತ್ನ ಮಾಡಲಾಗುತ್ತಿದೆ: ಬಿ.ಎಸ್.ಯಡಿಯೂರಪ್ಪ - Lok Sabha Election 2024

ABOUT THE AUTHOR

...view details