ಬೆಂಗಳೂರು : ಯಾರೋ ಒಂದಿಬ್ಬರು ಹಗುರವಾಗಿ ಮಾತನಾಡುತ್ತಿರಬಹುದು. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದು ಬೇಡ. ಹೈಕಮಾಂಡ್ ನಾಯಕರು ಕೈಕಟ್ಟಿ ಕೂತಿದ್ದಾರೆ ಎಂದು ಯಾರೂ ಭಾವಿಸಬೇಡಿ ಎಂದು ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಪರೋಕ್ಷವಾಗಿ ಭಿನ್ನರ ಬಗ್ಗೆ ಮಾತನಾಡಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಮಾಜಿ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಸುಮ್ಮನೆ ಕುಳಿತಿಲ್ಲ. ಆ ರೀತಿ ನೀವು ಭಾವಿಸಿದರೆ ಅದು ತಪ್ಪು. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎನ್ನುವುದನ್ನು ವರಿಷ್ಠರು ಮಾಡ್ತಾರೆ. ನೀವು ಯಾರು ಇನ್ಮೇಲೆ ಅದಕ್ಕೆ ರಿಯಾಕ್ಟ್ ಮಾಡಬೇಡಿ ಎಂದು ಖಡಕ್ ಸಂದೇಶ ನೀಡಿದರು.
ಪ್ರಧಾನಿ ನರೇಂದ್ರ ಮೋದಿ , ಅಮಿತ್ ಶಾ ಅವರು ಯಾರಿಗೆ ಏನು ಮಾಡಬೇಕೋ ಅದನ್ನು ಮಾಡುವುದಕ್ಕೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಯಾವ ಸಂಶಯ, ಅನುಮಾನ ಇಟ್ಟುಕೊಳ್ಳೋದು ಬೇಡ ಎಂದು ಹೇಳುವ ಮೂಲಕ ಸಭೆಯಲ್ಲಿ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರೆಯುತ್ತಾರೆ ಎಂಬ ಸುಳಿವು ಕೊಟ್ಟರು.