ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ನಿರಂತರವಾಗಿ ಸುಳ್ಳು ಹೇಳುತ್ತಲೇ ಬಂದಿದೆ: ಬೊಮ್ಮಾಯಿ - Basavaraj Bommai - BASAVARAJ BOMMAI

ಕಾಂಗ್ರೆಸ್ ನಿರಂತರವಾಗಿ ಸುಳ್ಳು ಹೇಳುತ್ತಲೇ ಬಂದಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.

Former CM Basavaraj Bommai
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

By ETV Bharat Karnataka Team

Published : Apr 7, 2024, 10:20 PM IST

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ

ಹಾವೇರಿ: ಬಿಜೆಪಿ ಕೇಂದ್ರ ನಾಯಕರು ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಾರೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ನದಿಹರಳಹಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಿರಂತರವಾಗಿ ಸುಳ್ಳು ಹೇಳುತ್ತಲೇ ಬಂದಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಹುಟ್ಟಿದ್ದೇ ಸುಳ್ಳಿನಿಂದ. ಮಹಾತ್ಮಾ ಗಾಂಧಿಯವರು ಸ್ವಾತಂತ್ರ್ಯಾ ಬಂದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸುವಂತೆ ಹೇಳಿದ್ದರು. ಇವರು ಕಾಂಗ್ರೆಸ್​ನ್ನು ವಿಸರ್ಜಿಸದೆ ಸುಳ್ಳು ಹೇಳಿಕೊಂಡೆ ಬರುತ್ತಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದರು.

ಇಂದಿರಾ ಗಾಂಧಿಯವರು ಗರೀಬಿ ಹಠಾವೋ ಅಂತ ಹೇಳಿದ್ದರು. ದೇಶದಲ್ಲಿ ಈಗಲೂ ಬಡತನ ಇದೆ. ಅವರು ಸುಳ್ಳು ಹೇಳುತ್ತಾರೆ ಎನ್ನುವುದಕ್ಕೆ ಇದೊಂದೇ ಸಾಕ್ಷಿ ಸಾಕು ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಸೋಲಿನ ಭಯದಿಂದ ಗಲ್ಲಿಗಲ್ಲಿ ಓಡಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ. ಕಣ ಸಿದ್ಧವಾಗಿದೆ. ವಿಶ್ವಾಸವಿದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ. ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಹಾನಗಲ್‌: ಬೊಮ್ಮಾಯಿ ಮತಬೇಟೆ, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಟೀಕಾಪ್ರಹಾರ - Bommai Campaign

ABOUT THE AUTHOR

...view details