ಕರ್ನಾಟಕ

karnataka

ETV Bharat / state

ಬರ ಪರಿಹಾರ ಸಾಲಕ್ಕೆ ಜಮೆ ಕ್ರೂರಾತಿ ಕ್ರೂರ ವರ್ತನೆ: ಕುಮಾರಸ್ವಾಮಿ ಕಿಡಿ - H D Kumaraswamy - H D KUMARASWAMY

ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಬರ ಪರಿಹಾರ ಹಣ ವಿತರಣೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

kumaraswamy
ಹೆಚ್.ಡಿ. ಕುಮಾರಸ್ವಾಮಿ (Pic: IANS)

By ETV Bharat Karnataka Team

Published : May 16, 2024, 1:01 PM IST

ಬೆಂಗಳೂರು:''ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ, ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ'' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್​ ಮೂಲಕ ಆಕ್ರೋಶ ಹೊರಹಾಕಿರುವ ಕುಮಾರಸ್ವಾಮಿ, ''ಕೇಂದ್ರ ಸರ್ಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್​ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ'' ಎಂದು ಕಿಡಿಕಾರಿದ್ದಾರೆ.

''ರಾಜ್ಯ ಸರ್ಕಾರವು ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್​ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು'' ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ ಜಿಲ್ಲೆಗೆ 247 ಕೋಟಿ ಬರ ಪರಿಹಾರ ಬಿಡುಗಡೆ: ಡಿಸಿ ನಿತೇಶ್​ ಪಾಟೀಲ ಮಾಹಿತಿ - Drought Relief Fund

ABOUT THE AUTHOR

...view details