ಬೆಂಗಳೂರು :ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.
ಹೃದಯಕ್ಕೆ ಸಂಬಂಧಿಸಿದಂತೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಮುಂದಿನ ವಾರ ಚೆನ್ನೈಗೆ ತೆರಳಲಿದ್ದಾರೆ.
ಮಾ. 19ರಂದು ಚೆನ್ನೈಗೆ ತೆರಳುವ ಅವರು ಮಾ. 21 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಕುಮಾರಸ್ವಾಮಿ ಅವರಿಗೆ ಈಗಾಗಲೇ ವೈದ್ಯರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಶಸ್ತ್ರ ಚಿಕಿತ್ಸೆ ಬಳಿಕ ವಿಶ್ರಾಂತಿ ಪಡೆದು ಲೋಕಸಭಾ ಚುನಾವಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಿಂದೆಯೂ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಹೃದಯಕ್ಕೆ ಸಂಬಂಧಿಸಿದಂತೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದರ ಮಧ್ಯೆ ನವದೆಹಲಿಗೆ ತೆರಳುವ ಸಾಧ್ಯತೆ ಇದೆ. ಇತ್ತೀಚೆಗೆ ಅವರು ಲಘು ಪಾರ್ಶ್ವವಾಯು ಸಮಸ್ಯೆಗೆ ಒಳಗಾಗಿ ಚಿಕಿತ್ಸೆ ಪಡೆದಿದ್ದರು. ಈಗಾಗಲೇ ಅವರು ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.