ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರಿಗೆ ಸೇರಿದ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಸ್ಥಿರಾಸ್ತಿ ಹಾಗೂ ಚರಾಸ್ತಿಯನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲಾಗಿದೆ.
ನ್ಯಾಯಾಲಯದ ಆದೇಶದಂತೆ ಅಪಾರ ಪ್ರಮಾಣದ ಚಿನ್ನಾಭರಣ, ಜಮೀನು ಪತ್ರಗಳು ಸೀಜ್ ಮಾಡಲಾಗಿದ್ದ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲಾಗಿದೆ. ಖಡ್ಗ, ಡಾಬು, ಕೈ ಗಡಿಯಾರ, ಪೆನ್ ಸೇರಿದಂತೆ 27 ಕೆ.ಜಿ. ವಿವಿಧ ಚಿನ್ನಾಭರಣಗಳು ಇನ್ನಿತರ ದುಬಾರಿ ಮೌಲ್ಯದ 1606 ವಸ್ತುಗಳನ್ನು ಕೊಡಲಾಗಿದೆ.
ಪೊಲೀಸ್ ಭದ್ರತೆಯಲ್ಲಿ ಜಯಲಲಿತಾ ಚಿನ್ನಾಭರಣ ತಮಿಳುನಾಡಿಗೆ ಕೊಂಡೊಯ್ಯಲಾಯಿತು (ETV Bharat) ಈ ಸಂಬಂಧ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಸರ್ಕಾರಿ ವಿಶೇಷ ಅಭಿಯೋಜಕ ಕಿರಣ್ ಜವಳಿ, "ನ್ಯಾಯಾಲಯದ ಆದೇಶದಂತೆ ತಮಿಳುನಾಡು ವಿಚಕ್ಷಣಾ ಅಧಿಕಾರಿಗಳ ಸಮಕ್ಷಮದಲ್ಲಿ ಪರಿಶೀಲನೆ ನಡೆಸಿ ಒಟ್ಟು 27 ಕೆ.ಜಿ ಚಿನ್ನದ ವಿವಿಧ ವಸ್ತುಗಳನ್ನು ಹಿಂತಿರುಗಿಸಲಾಗಿದೆ. ಈಗಾಗಲೇ ಬಸ್ಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡಲಾಗಿದೆ. ಅಷ್ಟೇ ಅಲ್ಲದೆ ಸುಮಾರು 1526 ಎಕರೆ ಜಾಗದ ಆಸ್ತಿ ಪತ್ರಗಳನ್ನು ತಮಿಳುನಾಡು ಸರ್ಕಾರಕ್ಕೆ ಮರಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಇಂದು ಬಿಗಿ ಬಂದೋಬಸ್ತ್ ಜೊತೆ ಜಯಲಲಿತಾ ಅವರಿಗೆ ಸೇರಿದ ವಸ್ತುಗಳನ್ನು ನಗರದಿಂದ ಆರು ಟ್ರಂಕ್ಗಳಲ್ಲಿ ತಮಿಳುನಾಡಿಗೆ ಕೊಂಡೊಯ್ಯಲಾಗಿದೆ. ಸದ್ಯ ಜಯಲಲಿತಾ ಅವರಿಂದ ವಶಪಡಿಸಿಕೊಂಡ ಯಾವುದೇ ವಸ್ತುಗಳಿಲ್ಲ" ತಿಳಿಸಿದ್ದಾರೆ.
ಪೊಲೀಸ್ ಭದ್ರತೆಯಲ್ಲಿ ಜಯಲಲಿತಾ ಚಿನ್ನಾಭರಣ ತಮಿಳುನಾಡಿಗೆ ಕೊಂಡೊಯ್ಯಲಾಯಿತು (ETV Bharat) ಈ ಹಿಂದೆ ವಶಕ್ಕೆ ಪಡೆದುಕೊಂಡ ಸೀರೆಗಳನ್ನು ಮರಳಿಸಲಾಗಿತ್ತು. ಈ ಮೂಲಕ ದಶಕಗಳಿಂದ ಬಾಕಿ ಉಳಿದಿದ್ದ ವ್ಯಾಜ್ಯ ಇತ್ಯರ್ಥವಾಗಿದೆ ತಿಳಿಸಿದರು.
ಪೊಲೀಸ್ ಭದ್ರತೆಯಲ್ಲಿ ಜಯಲಲಿತಾ ಚಿನ್ನಾಭರಣ ತಮಿಳುನಾಡಿಗೆ ಕೊಂಡೊಯ್ಯಲಾಯಿತು (ETV Bharat) ಏನೆಲ್ಲಾ ವಶಕ್ಕೆ ಪಡೆದುಕೊಳ್ಳಲಾಗಿತ್ತು ?7,040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜಿರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂ. ನಗದು ಸೇರಿದಂತೆ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.
ಪೊಲೀಸ್ ಭದ್ರತೆಯಲ್ಲಿ ಜಯಲಲಿತಾ ಚಿನ್ನಾಭರಣ ತಮಿಳುನಾಡಿಗೆ ಕೊಂಡೊಯ್ಯಲಾಯಿತು (ETV Bharat) ಪ್ರಕರಣದ ಹಿನ್ನೆಲೆ :ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಲಲಿತಾಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂ. ದಂಡ ವಿಧಿಸಿ 2014ರ ಸೆ.27ರಂದು ಆದೇಶಿಸಿತ್ತು. ಜೊತೆಗೆ, ಜಪ್ತಿ ಮಾಡಲಾದ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡದ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು. ಈ ನಡುವೆ ಜಯಲಿತಾ ಮೃತಪಟ್ಟಿದ್ದರು. ಆದ್ದರಿಂದ ಜಯಲಲಿತಾರ ಒಡವೆಗಳ ಹಸ್ತಾಂತರ ಕುರಿತು ಆರ್‌ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ಜಯಲಲಿತಾ ಅವರ ವಸ್ತುಗಳ ವಿಲೇವಾರಿಗೆ ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡುವಂತೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಜಯಲಲಿತಾ ಚಿನ್ನಾಭರಣ (ETV Bharat) ಇದನ್ನೂ ಓದಿ:ಜಯಲಲಿತಾರ ಆಸ್ತಿಗಳನ್ನು ಹಿಂದಿರುಗಿಸುವಂತೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್