ಬೆಂಗಳೂರು:ವಯೋಸಹಜ ಅನಾರೋಗ್ಯದಿಂದ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸದ್ಯದಲ್ಲೇ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ, ಆರೋಗ್ಯದ ವಿವರ ನೀಡುವುದಾಗಿ ವೈದ್ಯರು ತಿಳಿಸಿದ್ದಾರೆ.
ಮಾಜಿ ಸಿಎಂ ಎಸ್.ಎಂ.ಕೃಷ್ಣ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ - S M Krishna - S M KRISHNA
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Published : Apr 29, 2024, 4:37 PM IST
ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಎಸ್.ಎಂ.ಕೃಷ್ಣ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವೈದ್ಯರ ಸೂಚನೆ ಮೇರೆಗೆ ವೈದೇಹಿ (ಮಲ್ಯ) ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ವೈದೇಹಿ ಆಸ್ಪತ್ರೆಯಲ್ಲಿಯೂ ಮಣಿಪಾಲ್ ಆಸ್ಪತ್ರೆ ವೈದ್ಯರೇ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಈ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ದೈಹಿಕ ವ್ಯಾಯಾಮ ಸೇರಿದಂತೆ ಅಗತ್ಯ ಚಿಕಿತ್ಸೆಗೆಂದು ಶಿಫ್ಟ್ ಮಾಡಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:ಸಿದ್ದರಾಮಯ್ಯನವರು ಜೀವನದಲ್ಲಿ ಯಾವತ್ತೂ ನಿಜ ಹೇಳಿಲ್ಲ: ವಿ. ಸೋಮಣ್ಣ - Lok Sabha Election 2024