ಬೆಂಗಳೂರು: ಕರ್ನಾಟಕ ಸೇರಿ ಎಲ್ಲ ರಾಜ್ಯಗಳಿಗೂ ಕೇಂದ್ರ ನ್ಯಾಯಬದ್ಧವಾಗಿ ಪರಹಾರ ಕೊಡಲಿದೆ, ಕಾಂಗ್ರೆಸ್ನವರು ಸ್ವಲ್ಪ ತಾಳ್ಮೆಯಿಂದ ಇದ್ದರೆ ಹಣ ಬಿಡುಗಡೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾಂಗ್ರೆಸ್ ಪ್ರತಿಭಟನೆಗೆ ತಿರುಗೇಟು ನೀಡಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸ ಧವಳಗಿರಿಯಲ್ಲಿ ತುಮಕೂರು ಪ್ರವಾಸಕ್ಕೂ ಮುನ್ನ ಮಾತನಾಡಿದ ಅವರು, ಕೇಂದ್ರದ ವಿರುದ್ಧ ಕಾಗ್ರೆಸ್ ಪ್ರತಿಭಟನೆ ಮಾಡಿದ್ದಕ್ಕೆ ವಾಗ್ದಾಳಿ ನಡೆಸಿದರು. ಆವತ್ತಿಂದಲೂ ಇವತ್ತಿನವರೆಗೂ ಕಾಂಗ್ರೆಸ್ನವರು ಅದೇ ಮಾತಾಡುತ್ತಿದ್ದಾರೆ. ಪರಿಹಾರದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಎಲ್ಲ ರಾಜ್ಯಗಳಿಗೂ ನ್ಯಾಯಬದ್ಧವಾಗಿ ಪರಿಹಾರ ಕೊಡ್ತೇವೆ ಅಂತ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಹ ಇದನ್ನೇ ಹೇಳಿದ್ದಾರೆ. ಕಾಂಗ್ರೆಸ್ನವರು ಸ್ವಲ್ಪ ತಾಳ್ಮೆಯಿಂದ ಇದ್ದರೆ, ಹಣವೂ ಬಿಡುಗಡೆ ಆಗುತ್ತದೆ, ಕೆಲಸ ಸಹ ಮಾಡಬಹುದು ಎಂದರು.