ಕರ್ನಾಟಕ

karnataka

ETV Bharat / state

ನಾಳೆ ಕೇಂದ್ರ ಬಜೆಟ್: ಬಿಜೆಪಿ ನಿರೀಕ್ಷೆಗಳ ಬಗ್ಗೆ ಅಶ್ವತ್ಥನಾರಾಯಣ ಹೇಳಿದ್ದೇನು?

ಕಾಂಗ್ರೆಸ್ ಅವಧಿಯಲ್ಲಿ ಕರ್ನಾಟಕಕ್ಕೆ ಏನೆಲ್ಲ ಅನ್ಯಾಯವಾಗಿತ್ತೋ ಅದನ್ನು ಸರಿಪಡಿಸುವ ಕೆಲಸ ಮೋದಿ ನೇತೃತ್ವದ ಕೇಂದ್ರದ ಎನ್​ಡಿಎ ಸರ್ಕಾರದಿಂದ ಆಗುತ್ತಿದೆ ಎಂದು ಮಾಜಿ ಡಿಸಿಎಂ ಡಾ ಅಶ್ವತ್ಥ ನಾರಾಯಣ ಹೇಳಿದ್ದಾರೆ.

former-dcm-dr-aswatthanarayan-reaction-on-union-budget
ನಾಳೆ ಕೇಂದ್ರ ಬಜೆಟ್: ಬಿಜೆಪಿ ನಿರೀಕ್ಷೆಗಳ ಬಗ್ಗೆ ಅಶ್ವತ್ಥನಾರಾಯಣ ಹೇಳಿದ್ದೇನು?

By ETV Bharat Karnataka Team

Published : Jan 31, 2024, 9:26 PM IST

ಬೆಂಗಳೂರು: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇದ್ದಾಗ ಕರ್ನಾಟಕಕ್ಕೆ ಆಗಿದ್ದ ಅನ್ಯಾಯ ಸರಿಪಡಿಸುವ ಕೆಲಸ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರದಲ್ಲಿ ಆಗುತ್ತಿದ್ದು, ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಆಯವ್ಯಯದಲ್ಲಿಯೂ ರಾಜ್ಯಕ್ಕೆ ಒಳ್ಳೆಯ ಕೊಡುಗೆ ಸಿಗಲಿದೆ ಎಂದು ಮಾಜಿ ಡಿಸಿಎಂ ಡಾ ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅಶ್ವತ್ಥನಾರಾಯಣ, "ಸ್ವಾತಂತ್ರ್ಯಾ ನಂತರದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ಅವಧಿಯಲ್ಲಿ ಕರ್ನಾಟಕಕ್ಕೆ ಏನೆಲ್ಲಾ ಅನ್ಯಾಯವಾಗಿತ್ತೋ ಅದನ್ನು ಸರಿಪಡಿಸುವ ಕೆಲಸ ಮೋದಿ ನೇತೃತ್ವದ ಕೇಂದ್ರದ ಎನ್​ಡಿಎ ಸರ್ಕಾರದಿಂದ ಆಗುತ್ತಿದೆ. ಮೂಲ ಸೌಕರ್ಯಗಳು, ಕುಡಿಯುವ ನೀರಿನ ಯೋಜನೆ, ಗೃಹ ನಿರ್ಮಾಣ ಯೋಜನೆ, ರೈಲ್ವೆ ಮಾರ್ಗ ವಿಸ್ತರಣೆ, ರೈಲ್ವೆ ಮಾರ್ಗದ ವಿದ್ಯುದೀಕರಣ, ರೈಲ್ವೆ ನಿಲ್ದಾಣಗಳ ಮೇಲ್ದರ್ಜೆ, ಹೊಸ ವಿಮಾನ ನಿಲ್ದಾಣ ಸ್ಥಾಪನೆ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಗ್ರಾಮ ಸಡಕ್ ಯೋಜನೆ ಸೇರಿದಂತೆ ನೂರಾರು ಯೋಜನೆಗಳನ್ನು ನಮ್ಮ ರಾಜ್ಯಕ್ಕೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊಟ್ಟಿದೆ. ಈ ಬಾರಿಯ ಬಜೆಟ್​ನಲ್ಲಿ ಇನ್ನು ಹತ್ತಾರು ಯೋಜನೆಗಳು ಸಿಗಲಿವೆ" ಎಂದರು.

"ಸಬ್ ಅರ್ಬನ್ ರೈಲ್ವೆ, ನಮ್ಮ ಮೆಟ್ರೋ ಸೇರಿ ಹಲವಾರು ಯೋಜನೆ ಪ್ರಗತಿಯಲ್ಲಿದ್ದು, ಈ ಯೋಜನೆಗಳಿಗೆ ಮತ್ತಷ್ಟು ಅನುದಾನ ಸಿಗುವ ನಿರೀಕ್ಷೆ ಇದೆ. ರೈಲ್ವೆ, ವಸತಿ ಸೇರಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ಸಿಗಲಿದೆ. ಮೋದಿ ಗ್ಯಾರಂಟಿಗಳ ಕೊಡುಗೆಯೂ ಈ ಬಾರಿಯ ಬಜೆಟ್​ನಲ್ಲಿ ಪ್ರಕಟವಾಗುವ ನಿರೀಕ್ಷೆ ಇದೆ. ಒಟ್ಟಿನಲ್ಲಿ ಎಲ್ಲ ರೀತಿಯಲ್ಲಿಯೂ ಕರ್ನಾಟಕಕ್ಕೆ ಅತಿ ಹೆಚ್ಚಿನ ಒತ್ತು ಕೊಟ್ಟು ನಮ್ಮ ರಾಜ್ಯದ ಬೇಡಿಕೆಯನ್ನು ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಈಡೇರಿಸಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

"ಭದ್ರ ಮೇಲ್ದಂಡೆ ಯೋಜನೆ ಅನುಷ್ಠಾನ, ನದಿಗಳ ಜೋಡಣೆ ಕಾರ್ಯರೂಪದ ಘೋಷಣೆ ಮೂಲಕ ರಾಜ್ಯಕ್ಕೆ ನೀರಾವರಿ ಸೌಲಭ್ಯ ವಿಸ್ತರಿಸಲು ಗಂಗಾ-ಕಾವೇರಿ ನದಿ ಜೋಡಣೆ ಘೋಷಣೆ, ರೈಲ್ವೆ ಕೋಚ್ ಫ್ಯಾಕ್ಟರಿ, ವರ್ಕ್ ಶಾಪ್, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ, ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಆದ್ಯತೆ, ಎಕ್ಸ್ ಪ್ರೆಸ್ ವೇ, ಬ್ಯುಸಿನೆಸ್ ಕಾರಿಡಾರ್ ಘೋಷಣೆ ಸೇರಿದಂತೆ ಹಲವು ನಿರೀಕ್ಷೆಗಳನ್ನು ಇರಿಸಿಕೊಳ್ಳಲಾಗಿದೆ" ಎಂದರು.

ಇದನ್ನೂ ಓದಿ:ಗುರುವಾರ ಲೋಕಸಭೆಯಲ್ಲಿ ಮಧ್ಯಂತರ ಬಜೆಟ್​ ಮಂಡನೆ.. ಏನೆಲ್ಲ ನಿರೀಕ್ಷೆಗಳು?

ABOUT THE AUTHOR

...view details