ಕೊಡಗು:ಅಣ್ಣನೇ ತಮ್ಮನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಅರ್ವತೋಕ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಂಡ ಪ್ರಕಾಶ್( 57) ಮೃತ ತಮ್ಮ. ಸುಬ್ರಮಣಿ ಹತ್ಯೆ ಮಾಡಿದ ಅಣ್ಣ ಎಂದು ಗುರುತಿಸಲಾಗಿದೆ. ಇದೇ ವೇಳೆ, ಮಲ್ಲಂಡ ಪ್ರಕಾಶ್ ಅವರ ಪುತ್ರನಿಗೂ ಗುಂಡೇಟು ತಗುಲಿದ್ದು, ತೀವ್ರವಾಗಿ ಗಾಯಗೊಂಡಿರುವ ಅವರನ್ನು ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.
ಕೊಡಗು: ತಮ್ಮನಿಗೆ ಗುಂಡಿಟ್ಟು ಕೊಂದ ಅಣ್ಣ - MURDER NEAR PONNAMPET - MURDER NEAR PONNAMPET
ಅಣ್ಣನೇ ತಮ್ಮನಿಗೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ
ಕೊಡಗು: ತಮ್ಮನಿಗೆ ಗುಂಡಿಟ್ಟು ಕೊಂದ ಅಣ್ಣ!
Published : Mar 30, 2024, 3:28 PM IST
ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ, ಪ್ರಾಥಮಿಕ ಮಾಹಿತಿ ಪ್ರಕಾರ ಆಸ್ತಿ ವಿಚಾರ ಹಾಗೂ ಕೆಲವು ಕೌಟುಂಬಿಕ ಸಮಸ್ಯೆಗಳು ಎಂದು ತಿಳಿದು ಬಂದಿದ್ದು. ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಘಟನೆಗೆ ಖಚಿತ ಕಾರಣ ಏನು ಎಂಬುದರ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ:ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ - Murder in Bengaluru