ಹಾಸನ:ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ದೇವಸ್ಥಾನದಲ್ಲಿ ಕಾಲು ಜಾರಿಬಿದ್ದಿದ್ದು, ಪಕ್ಕೆಲುಬಿಗೆ ಪೆಟ್ಟಾದ ಹಿನ್ನೆಲೆ ಹೊಳೆನರಸೀಪುರದ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇವಸ್ಥಾನದಲ್ಲಿ ಜಾರಿಬಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ: ಐಸಿಯುನಲ್ಲಿ ಚಿಕಿತ್ಸೆ - h d revanna admitted to hospital - H D REVANNA ADMITTED TO HOSPITAL
ಮಾಜಿ ಸಚಿವ ಹೆಚ್. ಡಿ. ರೇವಣ್ಣ ದೇವಾಲಯದಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಪಕ್ಕೆಲುಬಿಗೆ ಪೆಟ್ಟಾದ ಹಿನ್ನೆಲೆ ಅವರು ಹೊಳೆನರಸೀಪುರದ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇವಸ್ಥಾನದಲ್ಲಿ ಜಾರಿಬಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ (ETV Bharat)
Published : Jul 17, 2024, 6:27 PM IST
ಏಕಾದಶಿ ಪ್ರಯುಕ್ತ ಉಪವಾಸವಿದ್ದ ರೇವಣ್ಣ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಬಳಿಕ ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದರು. ಈ ವೇಳೆ ಅವರು ಕಾಲು ಜಾರಿ ಬಿದ್ದಿದ್ದು, ಪಕ್ಕೆಲುಬಿಗೆ ತೀವ್ರವಾದ ನೋವಾಗಿದೆ. ಉಪವಾಸ ಹಾಗೂ ಪಕ್ಕೆಲುಬಿಗೆ ಪೆಟ್ಟಾದ ಕಾರಣ ಅವರು ಹೊಳೆನರಸೀಪುರದ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.