ಬೆಳಗಾವಿ :ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲಿನ ಹಿನ್ನೆಲೆ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಜಗದೀಶ್ ಶೆಟ್ಟರ್‌ಗೆ ಟಿಕೆಟ್ ಕೊಟ್ಟ ನಂತರ ಸ್ವಂತ ಹಣ ಖರ್ಚು ಮಾಡಿ ಕಾರ್ಯಕರ್ತರು ದುಡಿದಿದ್ದರು. ಅಹಂಕಾರದಿಂದ ಬಂದ ಅಭ್ಯರ್ಥಿಯನ್ನು ಕ್ಷೇತ್ರದ ಜನ ಸೋಲಿಸಿದ್ದಾರೆ ಎಂದು ಹೇಳಿದ್ದಾರೆ.
ಬೆಳಗಾವಿ ಮತ ಎಣಿಕೆ ಕೇಂದ್ರದಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ, ತಬ್ಬಿಕೊಂಡು ಶುಭಾಶಯ ಕೋರಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಗೆಲುವು ಬಿಜೆಪಿಯ ಸಾಮಾನ್ಯ ಕಾರ್ಯಕರ್ತರ ಗೆಲುವಾಗಿದೆ. ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಶಾಪದಿಂದ ಬೆಳಗಾವಿಯಲ್ಲಿ ಕಾಂಗ್ರೆಸ್ ಸೋತಿದೆ ಎಂದು ಆರೋಪಿಸಿದರು.