ತುಮಕೂರು: ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವೊಂದಕ್ಕೆ ತುಮಕೂರಿಗೆ ಭೇಟಿ ನೀಡಲಿದ್ದು, ಈ ವೇಳೆ ಧಿಕ್ಕಾರ ಕೂಗಿದ್ರೆ 1 ಲಕ್ಷ ರೂ ಬಹುಮಾನ ಕೊಡುತ್ತೇನೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎನ್ನಲಾದ ಆಡಿಯೋವನ್ನು ಇಂದು ಮಾಜಿ ಶಾಸಕ ಗೌರಿಶಂಕರ್ ಬಿಡುಗಡೆ ಮಾಡಿದರು.
"ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿಸಲು ಬಿಜೆಪಿ ಪ್ಲಾನ್ ಮಾಡಿದೆ. ಇದೇನಾ ಆರ್ಎಸ್ಎಸ್ ಹೇಳಿಕೊಟ್ಟಿರೋದು?, ಎಫ್ಐಆರ್ ಆಗಿ ತನಿಖೆ ಆಗಬೇಕು. ತುಮಕೂರು ಎಸ್ಪಿಗೆ ದೂರು ನೀಡಲು ಜಿಲ್ಲಾ ಕಾಂಗ್ರೆಸ್ ಘಟಕ ಮುಂದಾಗಿದೆ" ಎಂದು ತಿಳಿಸಿದರು.