ಕರ್ನಾಟಕ

karnataka

ETV Bharat / state

ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ - Prajwal Revanna

ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್‌ಗೆ ಪ್ರತ್ಯೇಕ ಅರ್ಜಿಸಲ್ಲಿಸಿದ್ದಾರೆ.

ಹೈಕೋರ್ಟ್‌
ಹೈಕೋರ್ಟ್‌ (ETV Bharat)

By ETV Bharat Karnataka Team

Published : Jul 4, 2024, 10:13 PM IST

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಎರಡು ಅರ್ಜಿಗಳನ್ನು ಸಲ್ಲಿಸಿದ್ದು, ಒಂದರಲ್ಲಿ ಜಾಮೀನು, ಮತ್ತೊಂದರಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದಾರೆ.

ಎರಡೂ ಅರ್ಜಿಗಳು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನ್ಯಾಯಪೀಠದ ಮುಂದೆ ಶುಕ್ರವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆಗೆ ನಿಗದಿಯಾಗಿವೆ. ಎರಡೂ ಅರ್ಜಿಗಳಲ್ಲಿ ಸಿಐಡಿಯನ್ನು ಪ್ರತಿವಾದಿ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್​ಗಳು ದಾಖಲಾಗಿವೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಸಂಬಂಧ ಪ್ರಜ್ವಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಎಫ್‌ಐಆರ್ ಸಂಬಂಧ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜಾಮೀನು ನಿರಾಕರಿಸಿ 2024ರ ಜೂ.26ರಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಇದರಿಂದ ಅವರು ರೆಗ್ಯೂಲಲ್ ಜಾಮೀನು ಕೋರಿ ಹೈಕೋರ್ಟ್‌​ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.

ಸಿಐಡಿ ದಾಖಲಿಸಿರುವ ಎರಡು ಪ್ರತ್ಯೇಕ ಎಫ್‌ಐಆರ್‌ಗಳ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಇದರೊಂದಿಗೆ ಮೂರು ಪ್ರತ್ಯೇಕ ಅರ್ಜಿಗಳನ್ನು ಪ್ರಜ್ವಲ್ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಪೋಕ್ಸೋ ಪ್ರಕರಣ: ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿಎಸ್​ವೈಗೆ ಕೋರ್ಟ್‌ ಸಮನ್ಸ್​ - Yediyurappa POCSO Case

ABOUT THE AUTHOR

...view details