ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯ ಮೈಸೂರಿನ ಸುಪುತ್ರ, ಅವರ ಹೆಸರನ್ನು ರಸ್ತೆಗೆ ಇಡೋದ್ರಲ್ಲಿ ತಪ್ಪೇನಿದೆ?: ಪ್ರತಾಪ್ ಸಿಂಹ - PRATAP SIMHA

ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆ ಬಹಳ ಇದೆ. ಅವರ ಹೆಸರನ್ನು ರಸ್ತೆಗೆ ಇಡುವ ವಿಚಾರದಲ್ಲಿ ಸಂಕುಚಿತ ಮನೋಭಾವನೆ ಬೇಡ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಪ್ರತಾಪ್ ಸಿಂಹ
ಪ್ರತಾಪ್ ಸಿಂಹ (ETV Bharat)

By ETV Bharat Karnataka Team

Published : Dec 25, 2024, 8:01 PM IST

ಮೈಸೂರು: ನಗರದ ಕೆ. ಆರ್​. ರಸ್ತೆಯ ಶ್ರೀಲಕ್ಷೀ ವೆಂಕಟೇಶ್ವರ ದೇವಸ್ಥಾನದಿಂದ ಕೆಆರ್​ಎಸ್‌ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಹೆಸರಿಡಲು ಇಲ್ಲಿನ ಮಹಾನಗರ ಪಾಲಿಕೆ ಮುಂದಾಗಿದೆ. ಇದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಈ ವಿಚಾರವಾಗಿ ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್​ ಸಿಂಹ, "40 ವರ್ಷದಿಂದ ವಿಧಾನಸಭೆಗೆ ಸಿದ್ದರಾಮಯ್ಯ ಹೋಗಿದ್ದಾರೆ. ಅವರ ಹೆಸರನ್ನು ರಸ್ತೆಗೆ ಇಡುವುದರಲ್ಲಿ ತಪ್ಪೇನಿದೆ?. ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಸೈದ್ಧಾಂತಿಕವಾಗಿ ನಾವು ಭಿನ್ನ ಪಕ್ಷದಲ್ಲಿರಬಹುದು. ಸೈದ್ಧಾಂತಿಕವಾಗಿ ನಾನು ಇವತ್ತಿಗೂ ಅವರನ್ನು ವಿರೋಧಿಸುತ್ತೇನೆ. ಸ್ಪಷ್ಟ ಬಹುಮತದ ಜೊತೆ ಎರಡು ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆ ಬಹಳ ಇದೆ" ಎಂದಿದ್ದಾರೆ.

ಮಾಜಿ ಸಂಸದ ಪ್ರತಾಪ್ ಸಿಂಹ (ETV Bharat)

"ಜಯದೇವ ಆಸ್ಪತ್ರೆ ಕಟ್ಟಡ, ಸೂಪರ್ ಸ್ಪೆಷಲಾಟಿ ಆಸ್ಪತ್ರೆ ನಿರ್ಮಾಣಕ್ಕೆ ಸಿದ್ದರಾಮಯ್ಯ ಅವರು ನೂರಾರು ಕೋಟಿ ರೂಪಾಯಿ ಅನುದಾನ ಕೊಟ್ಟಿದ್ದಾರೆ. ರಾಜಪಥ ಮಾಡಿಸಿದ್ದು ಸಿದ್ದರಾಮಯ್ಯ. ಈ ವಿಚಾರದಲ್ಲಿ ತಕಾರರು ಎತ್ತಿದರೆ ಮೊಸರಿನಲ್ಲಿ ಕಲ್ಲು ಹುಡುಕಿದಂತೆ ಆಗುತ್ತದೆ. ಈ ವಿಚಾರದಲ್ಲಿ ಸಂಕುಚಿತ ಮನೋಭಾವನೆ ಬೇಡ" ಎಂದು ಹೇಳಿದ್ದಾರೆ.

ಪ್ರಕಟಣೆ ಹೊರಡಿಸಿದ್ದ ಪಾಲಿಕೆ:ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡುವ ವಿಚಾರವಾಗಿ ಮೈಸೂರು ನಗರ ಪಾಲಿಕೆ ಡಿ.13 ಪ್ರಕಟಣೆ ಹೊರಡಿಸಿ 30 ದಿನದ ಒಳಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಕೋರಿತ್ತು. ಇದಕ್ಕೆ ಪರಿಸರ ಸಂರಕ್ಷಣಾ ಸಮಿತಿ ಸೇರಿದಂತೆ ಕೆಲವರಿಂದ ಆಕ್ಷೇಪ ವ್ಯಕ್ತವಾಗಿದೆ.

ಪ್ರತಿಪಕ್ಷ ನಾಯಕ ಅಶೋಕ್​ ರಿಂದಲೂ ಟೀಕೆ:ಬೆಂಗಳೂರಿನಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್​ ಅಶೋಕ್,​ ಕರ್ನಾಟಕಕ್ಕೆ ಕೃಷ್ಣರಾಜಸಾಗರ ಅಣೆಕಟ್ಟನ್ನು ನೀಡಿದ ಮನೆತನದವರ ಹೆಸರನ್ನು ತೆಗೆದು ಕೆ. ಆರ್. ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಇಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಹಾಗೇನಾದರೂ ಹೆಸರು ಇಡಬೇಕು ಎಂದಿದ್ದರೆ ಹೊಸ ರಸ್ತೆಯೊಂದನ್ನು ನಿರ್ಮಿಸಿ ಅವರ ಹೆಸರು ಅಥವಾ ಅವರ ಕುಟುಂಬದವರ ಹೆಸರನ್ನು ಇಡಲಿ. ಮಹಾರಾಜರ ಕುಟುಂಬ ಈ ನಾಡಿಗೆ ಸೇವೆ ಸಲ್ಲಿಸಿದೆ, ಅನ್ನ-ನೀರು ಕೊಟ್ಟಿದೆ. ಮಾರಿ ಕಣ್ಣು ಹೋರಿ ಮೇಲೆ ಎನ್ನುವಂತೆ ಆ ಕುಟುಂಬವನ್ನು ಗುರಿ ಮಾಡಬಾರದು. ಸಿಎಂ ಸಿದ್ದರಾಮಯ್ಯ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು, ಅವರು ಇಂತಹ ಕೆಲಸಕ್ಕೆ ಕೈ ಹಾಕುತ್ತಾರೆಂದರೆ ಜನರಿಗೆ ಅವರ ಬಗ್ಗೆ ಇರುವ ಭಾವನೆ ಬದಲಾಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದನ್ನೂ ಓದಿ:ಸರ್ಕಾರ ಹುಚ್ಚರ ಸಂತೆಯಾಗಿದೆ: ಆರ್. ಅಶೋಕ್, ಬೊಮ್ಮಾಯಿ ಕಿಡಿ

ABOUT THE AUTHOR

...view details