ಕಡಬ (ದಕ್ಷಿಣ ಕನ್ನಡ)/ಮೈಸೂರು: ರಾಜ್ಯದಲ್ಲಿ ರೈಲು ಮೂಲಸೌಕರ್ಯವನ್ನು ನವೀಕರಿಸುವ ಸಲುವಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ದಾಖಲೆಯ 7,524 ಕೋಟಿ ರೂಪಾಯಿ ಹಣವನ್ನು ಬಿಡುಗಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇದೇ ಫೆಬ್ರವರಿ 26ರಂದು ಮಧ್ಯಾಹ್ನ 12:30 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೈಸೂರು ವಿಭಾಗದಲ್ಲಿ ಸುಮಾರು 12 ಅಮೃತ ಭಾರತ ನಿಲ್ದಾಣಗಳ ಶಂಕುಸ್ಥಾಪನೆ ಮಾಡಲಿದ್ದಾರೆ.
ಫೆಬ್ರವರಿ 26, 2024 ರಂದು ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣ ಸೇರಿದಂತೆ ಇತರ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಬಿಎಸ್‌ಎಸ್ ಅಡಿ ಬಂಟ್ವಾಳ ರೈಲು ನಿಲ್ದಾಣ, ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ಬಳಿ ಶಂಕುಸ್ಥಾಪನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್ ಫಾರ್ಮ್ ಉನ್ನತೀಕರಣ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಜಿಲ್ಲೆಯ ಬಜೆಕೆರೆ ಹಾಲ್ಟ್ ರೈಲ್ವೆ ನಿಲ್ದಾಣದಲ್ಲಿ ಈ ಕೆಲಸಗಳ ಶಿಲಾನ್ಯಾಸ ಕಾರ್ಯ ನಡೆಯಲಿದೆ.