ಕರ್ನಾಟಕ

karnataka

ETV Bharat / state

ನೂತನ ಬೌರಿಂಗ್ ಆಸ್ಪತ್ರೆಗೆ ಮುಂದಿನ ತಿಂಗಳು ಶಂಕುಸ್ಥಾಪನೆ: ಸಚಿವ ಶರಣ ಪ್ರಕಾಶ್ ಪಾಟೀಲ್ - Bowring Hospital - BOWRING HOSPITAL

ಮಧ್ಯಮ ವರ್ಗದ ಜನರಿಗೆ ಅನುಕೂಲ ಆಗುವಂತೆ ಚರಕ ಆಸ್ಪತ್ರೆ ರೆಡಿಯಾಗ್ತಿದೆ. ಕೆಲವೇ ದಿನದಲ್ಲಿ ಲೋಕಾರ್ಪಣೆ ಆಗಲಿದೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.

ಸಚಿವ ಶರಣ ಪ್ರಕಾಶ್ ಪಾಟೀಲ್
ಸಚಿವ ಶರಣ ಪ್ರಕಾಶ್ ಪಾಟೀಲ್ (ETV Bharat)

By ETV Bharat Karnataka Team

Published : Aug 6, 2024, 8:19 AM IST

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಸದುದ್ದೇಶದಿಂದ ಶಿವಾಜಿ ನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ.

ಈ ಹಿಂದೆ ಇದ್ದ ಬೌರಿಂಗ್ ಆಸ್ಪತ್ರೆಯನ್ನು ನೆಲಸಮಗೊಳಿಸಿದ ನಂತರ ನೂತನ ಹತ್ತು ಅಂತಸ್ತಿನ 500 ಹಾಸಿಗೆಗಳ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಇಂದು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದರು. ಇದೇ ವೇಳೆ ಅಲ್ಲಿನ ಡೆಂಗ್ಯೂ ವಾರ್ಡ್​ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯಲ್ಲಿ ವೈದ್ಯರು ಸೂಕ್ತವಾದ ಚಿಕಿತ್ಸೆ ನೀಡುತ್ತಿದ್ದಾರೆಯೇ? ಬೆಳಗಿನ ಉಪಹಾರ, ಮಧ್ಯಾಹ್ನ ಭೋಜನ ಸರಿಯಾದ ಸಮಯಕ್ಕೆ ನೀಡುತ್ತಿದ್ದಾರೆಯೇ ಎಂದು ರೋಗಿಗಳಿಂದ ಮಾಹಿತಿ ಪಡೆದುಕೊಂಡರು.

ಇನ್ನೊಂದು ತಿಂಗಳಲ್ಲಿ ಚರಕ ಆಸ್ಪತ್ರೆ ಲೋಕಾರ್ಪಣೆಗೊಳ್ಳಲಿದೆ: ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಿಂದ ಶಿವಾಜಿನಗರದ ಚರಕ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಪಾಟೀಲ್, ಮಧ್ಯಮ ವರ್ಗದ ಜನರಿಗೆ ಅನುಕೂಲ ಆಗುವಂತೆ ಚರಕ ಆಸ್ಪತ್ರೆ ರೆಡಿಯಾಗ್ತಿದೆ. ಕೆಲವೇ ದಿನದಲ್ಲಿ ಲೋಕಾರ್ಪಣೆ ಆಗಲಿದೆ ಎಂದು ಹೇಳಿದರು.

ಈ ಕಟ್ಟಡ ಬಿಬಿಎಂಪಿ ಮಾಡಿದೆ, ಇನ್ಫ್ರಾಸ್ಟ್ರಕ್ಚರ್ ಕೊಟ್ಟಿದ್ದು ಇನ್ಫೋಸಿಸ್. ಲೋಕಾರ್ಪಣೆ ಮಾಡೋದಕ್ಕೆ ಸರ್ಕಾರದಿಂದ ಏನೇನು ಬೇಕು ಅದನ್ನು ಮಾಡಿಕೊಳ್ಳಲಾಗಿದೆ. ಕಾರ್ಡಿಯಾಕ್, ನ್ಯೂರೋ, ನೆಫ್ರಾಲಜಿ ಸೇರಿದಂತೆ ಎಲ್ಲಾ ಚಿಕಿತ್ಸೆ ಚರಕ ಆಸ್ಪತ್ರೆಯಲ್ಲಿ ನೀಡಲಾಗುತ್ತೆ. ಬಿಪಿಎಲ್ ಕಾರ್ಡ್​ದಾರರಿಗೆ ಉಚಿತ ಚಿಕಿತ್ಸೆ ಸಿಗಲಿದೆ ಎಂದು ಪಾಟೀಲ್ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ವಯನಾಡು ಸಂತ್ರಸ್ತರಿಗೆ ಮಿಡಿದ ಮನ: ಬೆಂಗಳೂರು ಗುತ್ತಿಗೆದಾರರಿಂದ ನೆರವು, ತಿಂಗಳ ಸಂಬಳ ನೀಡಲು ಮುಂದಾದ ಸ್ಮಶಾನ ಕಾಯುವ ಸಿಬ್ಬಂದಿ - Wayanad Land Slide

ABOUT THE AUTHOR

...view details