ಕರ್ನಾಟಕ

karnataka

ETV Bharat / state

ವಿಜಯಪುರ: ಕಾರು - ಲಾರಿ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ - VIJAYAPURA ACCIDENT - VIJAYAPURA ACCIDENT

ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Four killed after truck crashes into car
ವಿಜಯಪುರ: ಕಾರು-ಟ್ರಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

By ETV Bharat Karnataka Team

Published : Apr 13, 2024, 9:05 AM IST

Updated : Apr 13, 2024, 4:05 PM IST

ವಿಜಯಪುರ: ಕಾರು - ಲಾರಿ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ

ವಿಜಯಪುರ: ಸಿಮೆಂಟ್‌ ಸಾಗಾಟ ಮಾಡುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಎಲ್ಲರೂ ಒಂದೇ ಕುಟುಂಬದವರಾಗಿದ್ದು, ಸಂಬಂಧಿಗಳಾಗಿದ್ದರು ಎಂದು ತಿಳಿದು ಬಂದಿದೆ.

ಮೃತರನ್ನು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬರಟಗಿ ತಾಂಡಾದ ಅರ್ಜುನ ರಜಪೂತ (32), ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ರವಿನಾಥ ಸುನಿಲಾಲ್ ಪತ್ತಾರ (52), ಪುಷ್ಟಾ ರವಿನಾಥ ಪತ್ತಾರ (40) ಹಾಗೂ ಮುಧೋಳ ಪಟ್ಟಣದ ಮೇಘರಾಜ ರಜಪೂತ (12) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ವಿಜಯಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳನ್ನು ಜಯಶ್ರೀ ರಜಪೂತ, ನಯಾರಾ ರಜಪೂತ ಹಾಗೂ ಪ್ರೇಮಸಿಂಗ್ ರಜಪೂತ ಎಂದು ಗುರುತಿಸಲಾಗಿದೆ. ಇವರಲ್ಲಿ ಬಾಲಕಿ ನಯಾರಾ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ವಿಜಯಪುರದಿಂದ ಜಮಖಂಡಿಯ ದೇವಸ್ಥಾನಕ್ಕೆ ಕಾರಿನಲ್ಲಿ ಈ 7 ಜನರು ತೆರಳುತ್ತಿದ್ದರು. ಜಮಖಂಡಿಯಿಂದ ಸಿಮೆಂಟ್ ಲೋಡ್ ತುಂಬಿದ್ದ ಲಾರಿಯು ವಿಜಯಪುರದತ್ತ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬಬಲೇಶ್ವರ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಅಪಘಾತದ ರಭಸಕ್ಕೆ ಕಾರಿನಲ್ಲೇ ಸಿಲುಕಿಕೊಂಡಿದ್ದ ಶವಗಳನ್ನು ಸ್ಥಳೀಯರ ನೆರವಿನೊಂದಿಗೆ ಹೊರಗೆ ತೆಗೆದಿದ್ದಾರೆ.

ಈ ಬಗ್ಗೆ ಬಬಲೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ಶಂಕರ ಮಾರಿಹಾಳ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆಂದು ವಿಜಯಪುರ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಮೃತಪಟ್ಟ ಅರ್ಜುನ ಮತ್ತು ರವಿನಾಥ ಇಬ್ಬರೂ ಬ್ಯಾಂಕ್‌ ಸಿಬ್ಬಂದಿಯಾಗಿದ್ದು, ವರಸೆಯಲ್ಲಿ ಅಳಿಯ ಮಾವ ಆಗಿದ್ದರು. ಮಾವ ರವಿನಾಥನಿಗೆ ವಿಜಯಪುರಕ್ಕೆ ವರ್ಗವಾಗಿದ್ದು, ಅವರ ಮನೆಯ ವಸ್ತುಗಳನ್ನ ಮುಧೋಳದಿಂದ ವಿಜಯಪುರಕ್ಕೆ ಶಿಫ್ಟ್‌ ಮಾಡಲೆಂದು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ತಮಿಳುನಾಡಲ್ಲಿ ನಡೆದ ರಸ್ತೆ ಅಪಘಾತ: ಕರ್ನಾಟಕ ಮೀಸಲು ಪಡೆಯ ಹಿರಿಯ ಅಧಿಕಾರಿ, ಕಾನ್ಸ್​ಟೇಬಲ್​ಗಳು ಸಾವು - Road accident

Last Updated : Apr 13, 2024, 4:05 PM IST

ABOUT THE AUTHOR

...view details