ಉಳ್ಳಾಲ (ದಕ್ಷಿಣ ಕನ್ನಡ):ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಯಾಸಿರ್ (45), ಪತ್ನಿ ಮರಿಯಮ್ಮ (40) ಮತ್ತು ಮಕ್ಕಳಾದ ರಿಯಾನ ಮತ್ತು ರಿಫಾನ ಮೃತರು ಎಂದು ಗುರುತಿಸಲಾಗಿದೆ.
ಉಳ್ಳಾಲ; ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು - house collapsed in Ullal - HOUSE COLLAPSED IN ULLAL
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಮನೆ ಕುಸಿದು ನಾಲ್ವರು ಮೃತಪಟ್ಟಿದ್ದಾರೆ. ಪಕ್ಕದ ಮನೆಯ ಗೋಡೆಯು ಮನೆಯ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.
ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು (ETV Bharat)
Published : Jun 26, 2024, 8:29 AM IST
|Updated : Jun 26, 2024, 9:24 AM IST
ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆಯು ಯಾಸಿರ್ ಅವರ ಮನೆಯ ಮೇಲೆ ಬಿದ್ದಿದೆ. ಇದರ ಪರಿಣಾಮ ಮನೆ ಕುಸಿತವಾಗಿದೆ. ಮನೆಯಲ್ಲಿ ಮಲಗಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬಾಲಕಿ ಮೃತದೇಹಕ್ಕಾಗಿ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಪ್ರತ್ಯೇಕ ಅಗ್ನಿ ಅವಘಡ: ಮನೆಯಲ್ಲಿ ಉಸಿರುಗಟ್ಟಿ ನಾಲ್ವರು ಸಾವು; ಆಸ್ಪತ್ರೆ 3ನೇ ಮಹಡಿಯಿಂದ ನರ್ಸ್ ಬಚಾವ್
Last Updated : Jun 26, 2024, 9:24 AM IST