ಯಲಹಂಕ(ಬೆಂಗಳೂರು):ಪತಿ, ಪತ್ನಿ ಸೇರಿಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿಯಲ್ಲಿ ವರದಿಯಾಗಿದೆ. ಪತಿ ಅವಿನಾಶ್ (33), ಪತ್ನಿ ಮಮತಾ(30), ಮಕ್ಕಳಾದ ಆಧೀಯ(5) ಮತ್ತು ಅನಯಾ (3) ಮೃತರು.
ಮೃತರು ಕಲಬುರಗಿ ಮೂಲದವರು. ಕಳೆದ 6 ವರ್ಷಗಳ ಹಿಂದೆ ಯಲಹಂಕದ ಯಡಿಯೂರಪ್ಪ ನಗರದಲ್ಲಿ ವಾಸವಾಗಿದ್ದರು. ಇಂದು ಬೆಳಗ್ಗೆ ಮೃತನ ಸಹೋದರ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಪ್ರತಿಕ್ರಿಯೆ (ETV Bharat) ಅವಿನಾಶ್ ಕ್ಯಾಬ್ ಡ್ರೈವರ್ ಕೆಲಸ ಮಾಡುತ್ತಿದ್ದು, ಪತ್ನಿ ಮಮತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು ಎಂದು ಗೊತ್ತಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಎರಡು ಪ್ರಕರಣಗಳನ್ನು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಮಾಹಿತಿ ನೀಡಿದರು.
"ಕಲಬುರಗಿಯ ಮೃತ ಕುಟುಂಬ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಕಳೆದ ಹಲವು ದಿನಗಳಿಂದ ವಾಸಿಸುತ್ತಿದ್ದರು. ಮನೆ ಮಾಲೀಕ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಅವರ ಸಹೋದರ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮನೆ ಮಾಲೀಕ ಮಾತ್ರ ನೇಣು ಹಾಕಿದ ರೀತಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಎರಡು ಪ್ರತ್ತೇಕ ದೂರುಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ". - ಸಿ.ಕೆ.ಬಾಬಾ, ಎಸ್ಪಿ.
ಇದನ್ನೂ ಓದಿ:ರಾಮನಗರ: ದನದ ಕೊಟ್ಟಿಗೆಯಲ್ಲಿ ದಂಪತಿ ಆತ್ಮಹತ್ಯೆ