ಬೆಂಗಳೂರು: ಬೆಂಗಳೂರು ಕರಗ ಮಹೋತ್ಸವದ ವೇಳೆ ನೃತ್ಯ ಮಾಡುವಾಗ ಅಚಾನಕ್ಕಾಗಿ ಮೈ ತಾಕಿದ್ದಕ್ಕೆ ಆಕ್ರೋಶಗೊಂಡು ಬ್ಲೇಡ್ನಿಂದ ಬಾಲಕನನ್ನು ಹತ್ಯೆ ಮಾಡಿದ ಆರೋಪದ ಮೇಲೆ ನಾಲ್ವರು ಅಪ್ರಾಪ್ತರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾರಧಿ ಸಾವನ್ನಪ್ಪಿದ ಬಾಲಕ. ಶೇಷಾದ್ರಿಪುರದ ಜೆಸಿಡಬ್ಲ್ಯೂ ಕಾಲೊನಿಯಲ್ಲಿ ವಾಸವಾಗಿದ್ದ ಈತ ಟೈಲ್ಸ್ ಕೆಲಸ ಮಾಡಿಕೊಂಡಿದ್ದ. ಐತಿಹಾಸಿಕ ಬೆಂಗಳೂರು ಕರಗ ಹಿನ್ನೆಲೆಯಲ್ಲಿ ಅಣ್ಣಮ್ಮ ದೇವಸ್ಥಾನದ ಬಳಿ ಬಂದಿದ್ದ. ಬುಧವಾರ ಮುಂಜಾನೆ ಸುಮಾರು 3.30 ರ ವೇಳೆ ನೃತ್ಯ ಮಾಡುತ್ತಿದ್ದ ವೇಳೆ ಸಾರಧಿಯ ಮೈ ಅಲ್ಲೇ ಡ್ಯಾನ್ಸ್ ಮಾಡುತ್ತಿದ್ದ ಅಪ್ರಾಪ್ತರಿಗೆ ತಾಕಿದೆ. ಇಷ್ಟಕ್ಕೆ ಆಕ್ರೋಶಗೊಂಡ ಅಪ್ರಾಪ್ತರು ವಾಗ್ವಾದಕ್ಕೆ ಇಳಿದಿದ್ದಾರೆ. ನೋಡ ನೋಡುತ್ತಿದ್ದಂತೆ ಗಲಾಟೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.