ಕರ್ನಾಟಕ

karnataka

ETV Bharat / state

ಬಾಗಲಕೋಟೆ: ಕಬ್ಬು ತುಂಬಿದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ, ನಾಲ್ವರು ಸಾವು - ಬಾಗಲಕೋಟೆ

ಬಾಗಲಕೋಟೆಯಲ್ಲಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

people died  terrible road accident  accident in Bagalkot  ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ  ಪ್ರಾಣಬಿಟ್ಟ ನಾಲ್ವರು ಸ್ನೇಹಿತರು
ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ

By ETV Bharat Karnataka Team

Published : Jan 26, 2024, 9:12 AM IST

ಬಾಗಲಕೋಟೆ:ಕಬ್ಬು ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ತುಂಬರಮಟ್ಟಿ ಕ್ರಾಸ್​ ಬಳಿ ಇಂದು ಮುಂಜಾನೆ ನಡೆದಿದೆ. ಹುಬ್ಬಳ್ಳಿ ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ 4 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ಮೃತರನ್ನು ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ, (34), ಕಾಮಾಕ್ಷಿ ಬಡಿಗೇರ (35), ತುಕಾರಾಮ್ ತಳೇವಾಡ (30) ಗುರುತಿಸಲಾಗಿದೆ. ಇವರು ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದವರಾಗಿದ್ದು, ಬಾದಾಮಿಯಿಂದ ಹೊನಗನಹಳ್ಳಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಅಪಘಾತ ಸ್ಥಳ ಪರಿಶೀಲಿಸಿದ ಪೊಲೀಸರು

ಬಾಗಲಕೋಟೆ ಎಸ್‌ಪಿ ಅಮರನಾಥ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೆಸಿಬಿ ಮೂಲಕ ಕಬ್ಬು ತೆರವುಗೊಳಿಸಿ ಕಾರು ಹೊರತೆಗೆಯಲಾಯಿತು. ಮೃತದೇಹಗಳನ್ನು ಬೀಳಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಅಪಘಾತ ಸ್ಥಳದಲ್ಲಿ ಪೊಲೀಸರು

ಇದನ್ನೂ ಓದಿ:ಕಂಟೈನರ್ - ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ; ಗಂಗಾ ಸ್ನಾನಕ್ಕೆ ಹೊರಟಿದ್ದ 12 ಮಂದಿ ಸಾವು

ABOUT THE AUTHOR

...view details