ಕರ್ನಾಟಕ

karnataka

ETV Bharat / state

ಕಲಬುರಗಿ: ಪಿಕಪ್ - ಕಾರು ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ - PICKUP CAR ACCIDENT

ಪಿಕಪ್ ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

accident
ಅಪಘಾತಕ್ಕೀಡಾದ ವಾಹನಗಳು (ETV Bharat)

By ETV Bharat Karnataka Team

Published : Nov 9, 2024, 3:51 PM IST

ಕಲಬುರಗಿ:ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಶನಿವಾರ ನಸುಕಿನ ಜಾವ ಸಂಭವಿಸಿದೆ.

ಮೃತಪಟ್ಟವರು ಹೈದರಾಬಾದ್ ಮೂಲದ ಭಾರ್ಗವ ಕೃಷ್ಣ (55), ಅವರ ಪತ್ನಿ ಸಂಗೀತಾ (45), ಪುತ್ರ ಉತ್ತಮ ರಾಘವನ್ (28) ಹಾಗೂ ಕಾರು ಚಾಲಕ ಎಂದು ತಿಳಿದು ಬಂದಿದೆ. ಮೃತ ಚಾಲಕನ ಗುರುತು ಇನ್ನೂ ಪತ್ತೆ ಆಗಿಲ್ಲ.

ಮೃತರೆಲ್ಲರೂ ಗಾಣಗಾಪುರದ ದತ್ತಾತ್ರೆಯ ದೇವರ ದರ್ಶನಕ್ಕೆ ತೆರಳುತ್ತಿದ್ದರು ಎನ್ನಲಾಗುತ್ತಿದೆ. ಅವರ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದು, ಅವರು ಬಂದ ಮೇಲೆಯೇ ನಿಖರ ಮಾಹಿತಿ ತಿಳಿದು ಬರಲಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಭೀಕರ ರಸ್ತೆ ಅಪಘಾತ: ಐವರು ಸಾವು

ಘಟನೆಯಿಂದ ಕೆಲ ಗಂಟೆಗಳ ಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು. ಸ್ಥಳಕ್ಕೆ ದೌಡಾಯಿಸಿದ ಸಿಪಿಐ ಶಿವಶಂಕರ ಸಾಹು, ಮಹಾಗಾಂವ್​ ಪಿಎಸ್‌ಐ ಆಶಾ ರಾಠೋಡ್ ಮತ್ತು ಸಿಬ್ಬಂದಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮೃತದೇಹಗಳನ್ನು ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ:ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಐಟಿಐ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು

ABOUT THE AUTHOR

...view details