ಬೆಂಗಳೂರು/ಹುಬ್ಬಳ್ಳಿ:ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ವಿರುದ್ಧ ದೂರು ದಾಖಲಿಸಿಕೊಂಡಿರುವ ಬೆಂಗಳೂರಿನ ಬಸವೇಶ್ವರನಗರ ಠಾಣಾ ಪೊಲೀಸರು, ಹುಬ್ಬಳ್ಳಿಯಲ್ಲಿರುವ ಅವರ ಮನೆಗೆ ಕರೆತಂದು ಪರಿಶೀಲನೆ ನಡೆಸಿದರು.
ಬೆಂಗಳೂರಿನಿಂದ ಶನಿವಾರ ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಿದ ಎಸಿಪಿ ಚಂದನ್ ಕುಮಾರ್ ನೇತೃತ್ವದ ಪೊಲೀಸರ ತಂಡ, ಕೇಶ್ವಾಪುರದ ಇಂದಿರಾ ಕಾಲೋನಿಯಲ್ಲಿರುವ ಗೋಪಾಲ್ ಜೋಶಿ ಅವರ ಮನೆಯಲ್ಲಿ ಪರಿಶೀಲನೆ ನಡೆಸಿತು. ಬಳಿಕ ಗೋಪಾಲ್ ಜೋಶಿಯವರನ್ನು ಹೆಚ್ಚಿನ ವಿಚಾರಣೆಗೆ ಕೇಶ್ವಾಪುರ ಠಾಣೆಗೆ ಕರೆತರಲಾಯಿತು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಗೋಪಾಲ್ ಜೋಶಿ ಅವರನ್ನು ಕೊಲ್ಲಾಪುರ ಹಾಗೂ ಪುಣೆಯಲ್ಲಿ ಅವರ ಪುತ್ರ ಅಜಯ್ ಜೋಶಿ ಅವರನ್ನು ಬಂಧಿಸಿದ್ದಾರೆ. ಇಬ್ಬರನ್ನು ಬಂಧಿಸಿ ಹುಬ್ಬಳ್ಳಿಗೆ ಕರೆತಂದು ಪರಿಶೀಲನೆ ನಡೆಸಿದರು.