ಬೆಂಗಳೂರು:ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ನೀವೇನಾದರು ವಾಟ್ಸ್ಆ್ಯಪ್, ಟೆಲಿಗ್ರಾಂ ಗ್ರೂಪ್ಗಳನ್ನು ನಂಬಿದ್ದರೆ ಈಗಲೇ ಎಚ್ಚೆತ್ತುಕೊಳ್ಳಿ. ವಾಟ್ಸ್ಆ್ಯಪ್, ಟೆಲಿಗ್ರಾಂ ಗ್ರೂಪ್ಗಳ ಮೂಲಕ ವಂಚಕರು ರವಾನಿಸುವ ಸಂದೇಶಗಳಿಗೆ ಮಾರುಹೋಗಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಆಸೆಯಿಂದ ಹಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಪೊಲೀಸರಿಗೆ ಬರುವ ದೂರುಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆದ್ದರಿಂದ ವಂಚಕರ ಬಗ್ಗೆ ಎಚ್ಚರಿಕೆ ವಹಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಉತ್ತಮ ಲಾಭಾಂಶ ಕೊಡುವುದಾಗಿ ವಾಟ್ಸ್ಆ್ಯಪ್, ಟೆಲಿಗ್ರಾಂ ಗ್ರೂಪ್ಗಳ ಮೂಲಕ ಸೈಬರ್ ವಂಚಕರು ಈಗಾಗಲೇ ಹಲವಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ. ಹೀಗಾಗಿ ಅಂಥ ಗ್ರೂಪ್ಗಳಲ್ಲಿದ್ದರೆ ತಕ್ಷಣವೇ ಹೊರಬರುವಂತೆ ಪೊಲೀಸರು ತಿಳಿಸಿದ್ದಾರೆ.
ಹೇಗೆ ನಡೆಯುತ್ತೆ ವಂಚನೆ:ಷೇರು ಮಾರುಕಟ್ಟೆಯ ವ್ಯವಹಾರದ ಕುರಿತು ವಾಟ್ಸ್ಆ್ಯಪ್, ಟೆಲಿಗ್ರಾಂ ಗ್ರೂಪ್ಗಳನ್ನು ಸೃಷ್ಟಿಸುವ ವಂಚಕರು, ಷೇರುಮಾರುಕಟ್ಟೆಯಲ್ಲಿ ಅನೇಕರು ಹಣ ಹೂಡಿಕೆ ಮಾಡಿ ಕೋಟಿಗಟ್ಟಲೆ ಸಂಪಾದನೆ ಮಾಡಿರುವ ಬಗ್ಗೆ ಸುಳ್ಳು ಸಂದೇಶಗಳನ್ನು ಗ್ರೂಪ್‌ನಲ್ಲಿ ಕಳುಹಿಸುತ್ತಾರೆ.