ಕರ್ನಾಟಕ

karnataka

ETV Bharat / state

ಬಿಪಿಎಲ್​ ಕಾರ್ಡ್ ಇದ್ದವರಿಗೆ ಜಯದೇವ, ನೆಪ್ರೋಲಾಜಿಯಲ್ಲಿ ಉಚಿತ ಸೇವೆ: ಸಿಎಂ ಸಿದ್ದರಾಮಯ್ಯ - FREE SERVICE FOR BPL CARD HOLDERS

ಮಂಗಳೂರಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಸಿದ್ದರಾಮಯ್ಯ ಶಂಕು ಸ್ಥಾಪನೆ ಮಾಡಿದರು.

Foundation stone laying for Regional Office of Rajiv Gandhi Health Sciences University
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ (ETV Bharat)

By ETV Bharat Karnataka Team

Published : Jan 17, 2025, 4:08 PM IST

Updated : Jan 17, 2025, 4:39 PM IST

ಮಂಗಳೂರು: ಬಿಪಿಎಲ್​ ಕಾರ್ಡ್ ಇದ್ದವರಿಗೆ ಬೆಂಗಳೂರಿನ ಜಯದೇವ ಮತ್ತು ನೆಪ್ರೊಲಾಜಿಯಲ್ಲಿ ಎಲ್ಲ ರೀತಿಯ ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಿ ಎಂದು ವೈದ್ಯಕೀಯ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬಡವರಿಗೂ ಕೂಡ ದೊಡ್ಡ ದೊಡ್ಡ ಕಾಯಿಲೆಗಳು ಬರುತ್ತಿವೆ. ಕಿಡ್ನಿ ಕಸಿಗೆ 5000 ಮಂದಿ ಸಾಲಿನಲ್ಲಿದ್ದಾರೆ. ಕಿಡ್ನಿ ದಾನಿಗಳು ಸಿಕ್ಕರೆ ನಿತ್ಯ ಕಿಡ್ನಿ ಕಸಿ ಮಾಡುವ ನುರಿತ ವೈದ್ಯರ ತಂಡ ನಮ್ಮಲ್ಲಿದೆ" ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)

ಇಂದು ನಾನು ಶಂಕುಸ್ಥಾಪನೆ ನೆರವೇರಿಸಿರುವ ಪ್ರಾದೇಶಿಕ ಕಚೇರಿಯ ನಿರ್ಮಾಣ ಮತ್ತು ಕಾರ್ಯಕ್ಷಮತೆ ಎರಡೂ ಗುಣಮಟ್ಟದಲ್ಲಿ ಕೂಡಿರಲಿ ಎಂದು ಸೂಚಿಸಿದರು. ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿವಿಯ ಕೊಡುಗೆ ಅಪಾರವಾಗಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು. ಶ್ರೀಮಂತರು ಮತ್ತು ನಮ್ಮಂಥ ರಾಜಕಾರಣಿಗಳೂ ಸರ್ಕಾರಿ ಆಸ್ಪತ್ರೆಗೆ ಬರುವಂಥಾಗಬೇಕು ಎನ್ನುವ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು.

ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಉತ್ತಮ ಆರೋಗ್ಯ ಸೇವೆ ಇದ್ದರೂ ಈ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ‌. ಈ ದಿಕ್ಕಿನಲ್ಲೂ ಸರ್ಕಾರ ಯೋಚಿಸಿ ಕ್ರಮ ಕೈಗೊಳ್ಳಲಿದೆ ಎಂದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ (ETV Bharat)

ರಾಜೀವ್ ಗಾಂಧಿ ಆರೋಗ್ಯ ವಿವಿ ಆರೋಗ್ಯ ಸೇವೆ ಸರಳವಾಗಿ ಜನರಿಗೆ ಸಿಗುವ ದಿಕ್ಕಿನಲ್ಲಿ ಸಂಶೋಧನೆಗಳನ್ನು ಹೆಚ್ಚೆಚ್ಚು ನಡೆಸಬೇಕು. ದೇಶದ ಅತ್ಯುತ್ತಮ ಆರೋಗ್ಯ ಸೇವೆ ಬಡವರಿಗೂ ಸುಲಭವಾಗಿ ಸಿಗುವಂತೆ ಮಾಡಬೇಕು. ಈ ಕ್ಷೇತ್ರದ ಡಿಪ್ಲೊಮಾ ಮತ್ತು ಇತರೆ ಕೋರ್ಸ್​ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ವೈದ್ಯ ವಿಜ್ಞಾನ ಪದವೀಧರರೂ ಯುವನಿಧಿಗೆ ಅರ್ಹತೆ ಗಳಿಸಿದ್ದಾರೆ. ವೈದ್ಯ ವಿದ್ಯಾರ್ಥಿಗಳು ಇತರ ಕ್ಷೇತ್ರಗಳಿಗೆ ವಲಸೆ ಹೋಗದೆ ಆರೋಗ್ಯ ಕ್ಷೇತ್ರದಲ್ಲೇ ತಮ್ಮ ಸೇವೆ ಸಲ್ಲಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ:ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಚಾಲನೆ

Last Updated : Jan 17, 2025, 4:39 PM IST

ABOUT THE AUTHOR

...view details