ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಬಿಎಂಟಿಸಿ ದ್ವಿತೀಯ ಪಿಯುಸಿ ಪರೀಕ್ಷೆ- 2ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಮಾಡಲು ಅವಕಾಶ ಕಲ್ಪಿಸಿವೆ. ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮಗಳ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.
ಸಕ್ತ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಏಪ್ರಿಲ್ 29 ರಿಂದ ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳು ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರ ವಿದ್ಯಾಸಂಸ್ಥೆಗಳ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಬರೆಯಲು ನಿಯೋಜನೆಗೊಂಡಿದ್ದಾರೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರದ ಮುಖೇನ ಕೋರಿಕೆ ಸಲ್ಲಿಸಿದ್ದರು ಎಂದು ಸಾರಿಗೆ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.