ಕರ್ನಾಟಕ

karnataka

ETV Bharat / state

'ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷ ನಿಗದಿಪಡಿಸಿದ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು' - CM SIDDARAMAIAH

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರದ ಪೈಕಿ 71.54 ಕೋಟಿ ರೂ ವಸೂಲಿ ಮಾಡಲಾಗಿದೆ. ಇನ್ನು 13 ಕೋಟಿ ವಸೂಲಿಗೆ ಬಾಕಿ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Oct 15, 2024, 3:19 PM IST

ಬೆಂಗಳೂರು:"ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾದ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಿಗಮದಲ್ಲಿ ಸುಮಾರು 89.63 ಕೋಟಿ ರೂ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್​ ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲಿ ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿ ಮೊತ್ತವನ್ನು ವಸೂಲಿ ಮಾಡಿಕೊಡುವುದಾಗಿ ಎಸ್​ಐಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿದ್ದು, ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ" ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ (ETV Bharat)

ಇದೇ ವೇಳೆ, "ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ" ಎಂದು ತಿಳಿಸಿದರು.

ಉಪಚುನಾವಣೆಗೆ ಸಿದ್ಧ:"ರಾಜ್ಯದಲ್ಲಿ ನಡೆಯುವ ಉಪಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ದವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ" ಎಂದರು.

ಇದನ್ನೂ ಓದಿ:ವಾಲ್ಮೀಕಿ ನಿಗಮದ ಅವ್ಯವಹಾರ: ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರು

ABOUT THE AUTHOR

...view details