ಕರ್ನಾಟಕ

karnataka

ETV Bharat / state

ಪ್ರಜ್ವಲ್ ಪಾಸ್‌ಪೋರ್ಟ್ ರದ್ದತಿ ಕೇಂದ್ರ ಸರ್ಕಾರದ ಕರ್ತವ್ಯ: ಗೃಹ ಸಚಿವ ಜಿ.ಪರಮೇಶ್ವರ್ - G Parameshwara - G PARAMESHWARA

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ವಿಚಾರದಲ್ಲಿ ಕೇಂದ್ರ ಸರ್ಕಾರ ಟೀಕೆ-ಟಿಪ್ಪಣಿ ಮಾಡದೇ ಸಹಾಯ ಮಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಗೃಹ ಸಚಿವ ಜಿ. ಪರಮೇಶ್ವರ್
ಗೃಹ ಸಚಿವ ಜಿ. ಪರಮೇಶ್ವರ್ (ETV Bharat)

By ETV Bharat Karnataka Team

Published : May 22, 2024, 11:44 AM IST

Updated : May 22, 2024, 12:02 PM IST

ಗೃಹ ಸಚಿವ ಜಿ.ಪರಮೇಶ್ವರ್ (ETV Bharat)

ಬೆಂಗಳೂರು:ಪ್ರಜ್ವಲ್​ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

ಸದಾಶಿವನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಕೇಂದ್ರ ಕೂಡಾ ಇದರಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ-ಟಿಪ್ಪಣಿ ಮಾಡಿದರೆ ಪ್ರಯೋಜನವಿಲ್ಲ. ಈಗಾಗಲೇ ಪಾಸ್‌ಪೋರ್ಟ್ ರದ್ದತಿಗೆ ಸಿಎಂ ಪತ್ರ ಬರೆದಿದ್ದಾರೆ. ಸಿಎಂ ಪತ್ರಕ್ಕೆ ಕೇಂದ್ರ ಇನ್ನೂ ಸ್ಪಂದಿಸಿಲ್ಲ. ಈಗ ಅರೆಸ್ಟ್ ವಾರಂಟ್ ಹೊರಡಿಸಲಾಗಿದೆ. ಅದರ ಆಧಾರದಲ್ಲಾದರೂ ಪಾಸ್‌ಪೋರ್ಟ್ ರದ್ದು ಮಾಡಲಿ. ಅರೆಸ್ಟ್ ವಾರಂಟ್ ಜಾರಿಯಾಗಿರುವುದು ಕೋರ್ಟ್​ನಿಂದ. ಇದನ್ನು ಈಗಾಗಲೇ ಎಸ್ಐಟಿಯವರು ಕೇಂದ್ರಕ್ಕೆ ತಿಳಿಸಿದ್ದಾರೆ" ಎಂದರು.

ದೇವರಾಜೇಗೌಡ ರಿಲೀಸ್ ಮಾಡಿದ ಆಡಿಯೋದಲ್ಲಿ ಡಿ.ಕೆ.ಶಿವಕುಮಾರ್ ಧ್ವನಿ ಇರುವುದೇ ದೊಡ್ಡ ಸಾಕ್ಷಿ ಅಲ್ವೇ? ಅನ್ನುವ ಹೆಚ್​ಡಿಕೆ ಹೇಳಿಕೆಗೆ, "ಕುಮಾರಸ್ವಾಮಿ ಪ್ರತಿಯೊಂದಕ್ಕೂ ಟೀಕಿಸಿ ಮಾತನಾಡುತ್ತಿದ್ದಾರೆ. ಆದರೆ ಕಾನೂನು ಚೌಕಟ್ಟು ಮತ್ತು ಎಸ್ಐಟಿ‌ ನಿಯಮದನ್ವಯ ತನಿಖೆ ನಡೆಯುತ್ತದೆ. ಸರ್ಕಾರ ಕೂಡಾ ಇದನ್ನು ಗಮನಿಸಿಯೇ ಕೆಲಸ ಮಾಡುತ್ತದೆ" ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, "ಅದೇನು ಚರ್ಚೆ ಆಗ್ತಿಲ್ಲ. ಅದು ಹೈಕಮಾಂಡ್​ಗೆ ಬಿಟ್ಟಿದ್ದು. ಅವರು ಬದಲಾಯಿಸಬೇಕೆಂದರೆ ಬದಲಾಯಿಸುತ್ತಾರೆ" ಎಂದರು. ಮುಂದೆ ಕಾನೂನು ಸುವ್ಯವಸ್ಥೆ ಹದಗೆಟ್ಟ ಆರೋಪ ವಿಚಾರವಾಗಿ ಮಾತನಾಡುತ್ತಾ, "ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಯಾರ ಕಾಲದಲ್ಲಿ ಕೊಲೆ, ಅಪರಾಧ ಜಾಸ್ತಿ ಇತ್ತು ಅಂತ ದಾಖಲೆ ಬಿಡುಗಡೆ ಮಾಡಿದ್ದೇವೆ. ಇದಕ್ಕೆ ಮೊದಲು ಬಿಜೆಪಿಯವರು ಉತ್ತರ ಕೊಡಲಿ" ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ:ಹಾಸನ: 20 ದಿನಗಳ ನಂತರ ತವರಿಗೆ ಆಗಮಿಸಿದ ಹೆಚ್.ಡಿ.ರೇವಣ್ಣ - H D Revanna

Last Updated : May 22, 2024, 12:02 PM IST

ABOUT THE AUTHOR

...view details