ಕರ್ನಾಟಕ

karnataka

ETV Bharat / state

ಜಿ.ಟಿ.ದೇವೇಗೌಡರು ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಸತ್ಯ ಹೇಳಿದ್ದಾರೆ: ಸಿದ್ದರಾಮಯ್ಯ - CM Siddaramaiah - CM SIDDARAMAIAH

ಜಿ.ಟಿ.ದೇವೇಗೌಡರು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಸತ್ಯ ಮಾತನಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

cm siddaramaiah
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Oct 3, 2024, 7:35 PM IST

ಬೆಂಗಳೂರು:ಜಿ.ಟಿ.ದೇವೇಗೌಡರು ಇಂದು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು, ತಾಯಿ ಚಾಮುಂಡೇಶ್ವರಿಯನ್ನು ಸಾಕ್ಷಿಯಾಗಿಟ್ಟು ದಸರಾ ಹಬ್ಬದ ಬೃಹತ್ ಸಮಾರಂಭದಲ್ಲಿ ಸತ್ಯ ಮಾತನಾಡಿದ್ದಾರೆ, ಸತ್ಯಮೇವ ಜಯತೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಾಸಕಮಿತ್ರರಾದ ಜಿ.ಟಿ.ದೇವೇಗೌಡರು ಬಹಳ ವರ್ಷಗಳಿಂದ ನನ್ನ ವೈಯಕ್ತಿಕ ಮತ್ತು ರಾಜಕೀಯ ಜೀವನವನ್ನು ಸಮೀಪದಿಂದ ಕಂಡು ಬಲ್ಲವರು. ಕಳೆದ ಹಲವು ವರ್ಷಗಳಿಂದ ಅವರು ಮುಡಾದ ಸದಸ್ಯರೂ ಆಗಿದ್ದಾರೆ. ರಾಜಕೀಯವಾಗಿ ನಾವು ಬೇರೆ ಬೇರೆ ಪಕ್ಷದಲ್ಲಿರಬಹುದು. ಆದರೆ ಸತ್ಯ ಮತ್ತು ನ್ಯಾಯಕ್ಕೆ ಪಕ್ಷ ಇಲ್ಲ. ಅದು ವ್ಯಕ್ತಿಯ ಆತ್ಮಸಾಕ್ಷಿಗೆ ಸಂಬಂಧಿಸಿದ್ದು ಎಂದು ಸಿಎಂ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾನೆಂದೂ ದ್ವೇಷದ ರಾಜಕೀಯ ಮಾಡಿದವನಲ್ಲ, ವಿರೋಧಿ ರಾಜಕಾರಣಿಗಳ ವೈಯಕ್ತಿಕ ಬದುಕು ಇಲ್ಲವೇ, ಅವರ ಕುಟುಂಬವನ್ನು ರಾಜಕೀಯ ಜಿದ್ದಿಗೆ ಬಳಸಿಕೊಂಡವನಲ್ಲ ಎಂದು ತಿಳಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿರುವ ಅನೇಕ ನಾಯಕರಿಗೆ ಜಿ.ಟಿ.ದೇವೇಗೌಡರು ಹೇಳಿರುವ ಸತ್ಯ ಗೊತ್ತಿದೆ. ಆದರೆ ತಮ್ಮ ಪಕ್ಷದ ಕೆಲವು ಹಿರಿಯ ನಾಯಕರ ಒತ್ತಡಕ್ಕೆ ಬಲಿಯಾಗಿ ಮೌನವಾಗಿದ್ದಾರೆ. ಅವರೂ ಕೂಡಾ ಮುಕ್ತವಾಗಿ ಮಾತನಾಡಬೇಕಾದ ಕಾಲ ಸನ್ನಿಹಿತವಾಗಿದೆ. ರಾಜಕೀಯವನ್ನು ರಾಜಕೀಯವಾಗಿ ಎದುರಿಸಬೇಕೇ ವಿನ: ಸುಳ್ಳು ಆರೋಪಗಳ ಮೂಲಕ ಹೆಣೆಯುವ ರಾಜಕೀಯ ಷಡ್ಯಂತ್ರದಿಂದಲ್ಲ ಎಂದಿದ್ದಾರೆ. ‌

ಇದನ್ನೂ ಓದಿ:'ಎಫ್​ಐಆರ್​ ಆದವರೆಲ್ಲ ರಾಜೀನಾಮೆ ಕೊಡಿ ಎಂದಿದ್ದೇನೆ, ನನ್ನ ಮೇಲೂ ಬೇಕಿದ್ದರೆ ತನಿಖೆ ಮಾಡಲಿ' - G T Devegowda

ABOUT THE AUTHOR

...view details