ಕರ್ನಾಟಕ

karnataka

By ETV Bharat Karnataka Team

Published : 4 hours ago

ETV Bharat / state

ಬೆಂಗಳೂರಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರಿಂದ 'ಗಾಂಧಿ ನಡಿಗೆ' - Gandhi Nadige

ಬೆಂಗಳೂರು ನಗರದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್​ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ಗಾಂಧಿ ನಡಿಗೆ ಕೈಗೊಂಡರು.

CONGRESS LEADERS  GANDHI JAYANTHI  CM SIDDARAMAIAH AND DCM SHIVAKUMAR  BENGALURU
ಸಿಎಂ, ಡಿಸಿಎಂ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರಿಂದ ಗಾಂಧಿ ನಡಿಗೆ (ETV Bharat)

ಬೆಂಗಳೂರು:ಗಾಂಧಿ ಜಯಂತಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಗಾಂಧೀಜಿಯವರ ಅಧ್ಯಕ್ಷತೆಗೆ 100 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್​ ನಾಯಕರು 'ಗಾಂಧಿ ನಡಿಗೆ' ಹೆಸರಿನ ಪಾದಯಾತ್ರೆಯಲ್ಲಿ ಭಾಗಿಯಾದರು. ನಗರದ ಗಾಂಧಿ ಭವನದಿಂದ ವಿಧಾನಸೌಧದವರೆಗೆ ನಡೆದ ಪಾದಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಪ್ರಿಯಾಂಕ್ ಖರ್ಗೆ, ಹೆಚ್​.ಕೆ.ಪಾಟೀಲ್ ಸೇರಿದಂತೆ ಅನೇಕ ನಾಯಕರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.

ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, 'ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದವರು. ನಾವು ಅವರ ಆಚಾರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಗಾಂಧಿ‌ ಜಯಂತಿಯ ಪ್ರಯುಕ್ತ ಕೆಪಿಸಿಸಿಯಿಂದ ಎಲ್ಲ ಮಂತ್ರಿಗಳು, ಶಾಸಕರಿಗೆ ಆಯಾ ಜಿಲ್ಲೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚಿಸಿದ್ದೇವೆ ಎಂದರು.

ಕಾಂಗ್ರೆಸ್‌ ನಾಯಕರಿಂದ ಗಾಂಧಿ ನಡಿಗೆ (ETV Bharat)

ಬಳಿಕ ವಿಧಾನಸೌಧದ ಬಳಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ 'ಕಿತ್ತೂರು ವಿಜಯೋತ್ಸವದ ಜ್ಯೋತಿ'ಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.

ಕಾಂಗ್ರೆಸ್‌ ನಾಯಕರಿಂದ ಗಾಂಧಿ ನಡಿಗೆ (ETV Bharat)

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ ರಾಣಿ ಚೆನ್ನಮ್ಮನ ಸೇನೆಯಲ್ಲಿ ಸಂಗೊಳ್ಳಿ ರಾಯಣ್ಣ ಕೂಡ ಇದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು. ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚೆನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವ ಮತ್ತು ಕಿತ್ತೂರಿನ‌ ಅಭಿವೃದ್ಧಿಗೆ ಸರ್ಕಾರ ಸಕಲ ನೆರವನ್ನು ನೀಡುತ್ತಿದೆ. ಅಗತ್ಯ ಅನುದಾನವನ್ನೂ ನೀಡುತ್ತಿದೆ'' ಎಂದು ಹೇಳಿದರು.

ಕಾಂಗ್ರೆಸ್‌ ನಾಯಕರಿಂದ ಗಾಂಧಿ ನಡಿಗೆ (ETV Bharat)

'ಅಲ್ಲದೆ, ಇಂದು ಮಹಾತ್ಮ ಗಾಂಧಿಯವರ ಜಯಂತಿ ಜೊತೆಗೆ ಲಾಲ್ ಬಹದ್ದೂರ್​​ ಶಾಸ್ತ್ರಿ ಅವರ ಜನ್ಮದಿನವೂ ಹೌದು. ಗಾಂಧಿ ನಡಿಗೆ ಮೂಲಕ ಗಾಂಧಿ ತತ್ವಾದರ್ಶಗಳು ಇವತ್ತಿನ ಯುವ ಪೀಳಿಗೆಗೆ ತಲುಪಿಸುವ ಪ್ರಯತ್ನ ಮಾಡಿದ್ದೇವೆ' ಎಂದು ತಿಳಿಸಿದರು.

ಕಾಂಗ್ರೆಸ್‌ ನಾಯಕರಿಂದ ಗಾಂಧಿ ಜಯಂತಿ ಆಚರಣೆ (ETV Bharat)

ಓದಿ:ಗಾಂಧೀಜಿ-ಶಾಸ್ತ್ರಿ ಜಯಂತಿ: ಪ್ರಧಾನಿ ಮೋದಿ, ರಾಹುಲ್ ಗಾಂಧಿ​ ಸೇರಿ ಗಣ್ಯರಿಂದ ನಮನ - Mahatma Gandhi Jayanti

ABOUT THE AUTHOR

...view details