ಪುತ್ತೂರು(ದಕ್ಷಿಣ ಕನ್ನಡ): ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ 58ನೇ ವರ್ಷದ ಗಣೇಶೋತ್ಸವದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಶ್ರೀ ಕುಂಟಾರು ಗುರುತಂತ್ರಿಯವರು ಶ್ರೀ ಗಣೇಶನ ವಿಗ್ರಹ ಪ್ರತಿಷ್ಠಾಪನೆ ಮಾಡಿದರು.
ಬೆಳಗ್ಗೆ ಸಮಿತಿ ಪದಾಧಿಕಾರಿಗಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಬಳಿಕ ಬೃಹತ್ ಚಪ್ಪರದಲ್ಲಿ ಗಣೇಶನ ವಿಗ್ರಹ ಪ್ರತಿಷ್ಠಾಪನೆ ಕಾರ್ಯ ನಡೆಯಿತು. ಬಳಿಕ ಸಭಾ ವೇದಿಕೆ ಬಳಿ ಭಗವಾ ಧ್ವಜಾರೋಹಣವನ್ನು ವಿವೇಕಾನಂದ ಪದವಿ ಪೂರ್ವಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ ಅವರು ನೆರವೇರಿಸಿದರು.
ಈ ಸಂದರ್ಭ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಎಂ.ಕೆ. ಪ್ರಸಾದ್, ಮಾಜಿ ಶಾಸಕ ಸಂಜೀವ, ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ ಸೇರಿದಂತೆ ಹಲವು ಈ ವೇಳೆ ಉಪಸ್ಥಿತರಿದ್ದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಕಿಲ್ಲೆ ಮೈದಾನ, ಶ್ರೀ ದೇವತಾ ಸಮಿತಿ ವತಿಯಿಂದ 67ನೇ ವರ್ಷದ ಮಹಾಗಣೇಶೋತ್ಸದ ನಿಮಿತ್ತ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗಣೇಶಮೂರ್ತಿ ಪ್ರತಿಷ್ಠಾಪನೆ ನಡೆಯಿತು.