ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ ಬಸ್‌ಗೆ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ದೂರು ದಾಖಲು - GANG RAPE

ಬೆಂಗಳೂರಿನ ಕೆ.ಆರ್.ಮಾರ್ಕೆಟ್ ಬಳಿ ಮಹಿಳೆ ಮೇಲೆ ಇಬ್ಬರು ಅತ್ಯಾಚಾರ ಎಸಗಿರುವ ಆರೋಪ ಪ್ರಕರಣ ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಮಹಿಳೆ ಮೇಲೆ ಅತ್ಯಾಚಾರ
ಸಾಂದರ್ಭಿಕ ಚಿತ್ರ (IANS)

By ETV Bharat Karnataka Team

Published : Jan 21, 2025, 10:52 AM IST

ಬೆಂಗಳೂರು: ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಮೊಬೈಲ್, ನಗದು ಹಾಗೂ ಚಿನ್ನಾಭರಣ ದೋಚಿರುವ ಆರೋಪ ಕೇಳಿ ಬಂದಿದೆ. ಜನವರಿ 19ರಂದು ರಾತ್ರಿ 11:30ರ ಸುಮಾರಿಗೆ ಕೆ.ಆರ್.ಮಾರ್ಕೆಟ್ ಬಳಿಯ ಗೋಡೌನ್‌ ಸ್ಟ್ರೀಟ್‌ನಲ್ಲಿ ಘಟನೆ ನಡೆದಿದೆ ಎಂದು ಆರೋಪಿಸಿ 37 ವರ್ಷದ ಮಹಿಳೆಯೊಬ್ಬರು ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಂತ್ರಸ್ತ ಮಹಿಳೆ ಯಲಹಂಕಕ್ಕೆ ತೆರಳಲು ಕೆ.ಆ‌ರ್. ಮಾರ್ಕೆಟ್‌ ಬಳಿ ಬಸ್‌ಗಾಗಿ ಕಾಯುತ್ತಿದ್ದರು. ಈ ವೇಳೆ ಬಂದ ಇಬ್ಬರು ಅಪರಿಚಿತರು ಮಹಿಳೆಗೆ ದಾರಿ ತೋರಿಸುವುದಾಗಿ ಕರೆದೊಯ್ದಿದ್ದಾರೆ. ಬಳಿಕ ಗೋಡೌನ್ ಸ್ಟ್ರೀಟ್ ಬಳಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ನಂತರ ಬೆದರಿಸಿ ಮೊಬೈಲ್, ಹಣ, ಚಿನ್ನಾಭರಣ ದೋಚಿಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಸತ್ಯಾಸತ್ಯತೆಯ ಕುರಿತು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೂ ಶಂಕಿತ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಕಾನೂನು ಹೋರಾಟ ಮುಂದುವರಿಸಲು ಸಂತ್ರಸ್ತೆಯ ಪೋಷಕರ ನಿರ್ಧಾರ

ಇದನ್ನೂ ಓದಿ:ಮಂಗಳೂರು: ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, ದಂಡ

ABOUT THE AUTHOR

...view details