ಬೆಳಗಾವಿ :ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಬಸವನ ಗಲ್ಲಿಯಲ್ಲಿ ನಡೆದಿದೆ. ಮನೆಯಲ್ಲಿ ಗ್ಯಾಸ್ ಒಲೆ ಹೊತ್ತಿಸುವಾಗ ಈ ಅವಘಡ ಸಂಭವಿಸಿದೆ. ಲೈಟರ್ ಆನ್ ಮಾಡ್ತಿದ್ದಂತೆ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿದೆ. ಗಾಯಾಳುಗಳನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ : ಗ್ಯಾಸ್ ಸಿಲಿಂಡರ್ ಸ್ಫೋಟ, ಐವರಿಗೆ ಗಂಭೀರ ಗಾಯ - ಗ್ಯಾಸ್ ಸಿಲಿಂಡರ್ ಸ್ಫೋಟ
ಬೆಳಗಾವಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಾವಿ
Published : Jan 28, 2024, 8:02 PM IST
|Updated : Jan 28, 2024, 8:40 PM IST
ಬಸವನ ಗಲ್ಲಿಯ ಲಲಿತಾ ಭಟ್(48) ಮೋಹನ್ ಭಟ್(56), ಕಮಲಾಕ್ಷಿ ಭಟ್(80), ಹೇಮಂತ್ ಭಟ್(27), ಗೋಪಿಕೃಷ್ಣ ಭಟ್(84) ಗಾಯಾಳುಗಳು ಎಂದು ತಿಳಿದುಬಂದಿದೆ. ಐವರು ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಬೆಳಗಾವಿ: ಸಿಲಿಂಡರ್ ಸ್ಫೋಟ, ಚಿಕಿತ್ಸೆ ಫಲಿಸದೆ ಗಾಯಾಳು ಮಹಿಳೆ ಸಾವು
Last Updated : Jan 28, 2024, 8:40 PM IST