ಚಿಕ್ಕಮಗಳೂರು:ಡೆಂಗ್ಯೂ ಮಹಾಮಾರಿಗೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಡೆಂಗ್ಯೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ.
ಚಿಕ್ಕಮಗಳೂರು: ಡೆಂಗ್ಯೂ ಮಹಾಮಾರಿಗೆ ಬಾಲಕಿ ಬಲಿ - Girl dies of dengue
ಇತ್ತೀಚಿಗೆ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ತಮಿಳುನಾಡು ಮೂಲದ ವೃದ್ಧೆ ಸೇರಿ ಇಬ್ಬರು ಬಲಿಯಾಗಿದ್ದಾರೆ. ಇದೀಗ ಡೆಂಗ್ಯೂ ಮಹಾಮಾರಿಗೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ.
ಡೆಂಗ್ಯೂ ಮಹಾಮಾರಿಗೆ ಬಾಲಕಿ ಬಲಿ (ಸಾಂದರ್ಭಿಕ ಚಿತ್ರ( ETV Bharat))
Published : Jun 29, 2024, 11:00 PM IST
ರಾಜ್ಯ ಸರ್ಕಾರದ ವಿರುದ್ಧ ಮೃತ ಬಾಲಕಿ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಯಾವುದೇ ಸಹಾಯ ಬೇಡ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಡೆಂಗ್ಯೂ ಜ್ವರಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸ ಸಿಗುತ್ತಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.